ಶ್ರೀರಾಮನಹಳ್ಳಿ ರಸ್ತೆ ದುರಸ್ಥಿಗೆ ಸ್ಥಳ ಪರಿಶೀಲನೆ ನಡೆಸಿದ ಎಂಜಿನಿಯರ್

ದೊಡ್ಡಬಳ್ಳಾಪುರ: ತಾಲ್ಲೂಕಿನ ಶ್ರೀರಾಮನಹಳ್ಳಿ ಮಾರ್ಗವಾಗಿ ಶ್ರೀರಾಮನಹಳ್ಳಿ ಕಾಲೋನಿ, ಗಾಣದಾಳು ಮತ್ತು ಸಿಂಗೇನಹಳ್ಳಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ದುರಸ್ಥಿ ಕೈಗೊಳ್ಳುವ ಕುರಿತಂತೆ ಮಂಗಳವಾರ ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ತಾಲ್ಲೂಕು ಕೇಂದ್ರದಿಂದ ಸುಮಾರು 25 ಕಿ.ಮೀ ದೂರದ ಶ್ರೀರಾಮನಹಳ್ಳಿ,ಗಾಣದಾಳು, ಸಿಂಗೇನಹಳ್ಳಿ, ದಾಸರಪಾಳ್ಯ ಗ್ರಾಮಗಳ ರಸ್ತೆಗಳು ಹಾಳಾಗಿ ದಶಕಗಳೇ ಕಳೆದಿವೆ.ಈ ಬಗ್ಗೆ ಹಲವಾರು ಬಾರಿ ಈ ಭಾಗದ ಜನ ಮನವಿಗಳನ್ನು ಮಾಡಲಾಗಿತ್ತು.ಮಳೆಗಾಲದಲ್ಲಿ ರಸ್ತೆಗಳಲ್ಲಿ ಒಡಾಡಲು ಕಷ್ಟ ಎನ್ನುವ ದೂರುಗಳು ಕೇಳಿ ಬರುವುದು ಸಾಮಾನ್ಯ.ಆದರೆ ನಮ್ಮೂರಿನ ರಸ್ತೆಗಳಲ್ಲಿ ಬೇಸಿಗೆಯಲ್ಲೂ ಸಹ ಬರಲು ಕಷ್ಟವಾಗುತಿತ್ತು.ಅಷ್ಟರಮಟ್ಟಿಗೆ ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆ ಸಂಪರ್ಕ ಉತ್ತಮವಾಗಿಲ್ಲದ ಹಿನ್ನೆಲೆಯಲ್ಲಿ ಈ ಭಾಗದಿಂದ ರೈತರು ಮಾರುಕಟ್ಟೆಗೆ ಹಣ್ಣು,ತರಕಾರಿ ಮತ್ತಿತರೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಹರಸಾಹಸ ಪಡುವಂತಾಗಿತ್ತು ಎಂದು ಗ್ರಾಮಸ್ಥರು ಹೇಳಿದರು.      

ಶ್ರೀರಾಮನಹಳ್ಳಿ ಸಮೀಪ ಹರಿದು ಹೋಗುವ ದೊಡ್ಡಹಳ್ಳಕ್ಕೆ ಸೂಕ್ತ ಸೇತುವೆ ನಿರ್ಮಿಸಿದರೆ ಜನ ಸಂಚಾರಕ್ಕೆ, ಮಳೆಗಾಲದಲ್ಲಿ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿದ್ದರು ಸಹ ರೈತರು ತಮ್ಮ ಹೊಲಗಳಿಗೆ  ಹೋಗಲು ಸಲುಭವಾಗುತ್ತದೆ ಎನ್ನುವ ಒತ್ತಾಯವನ್ನು ಹಲವಾರು ವರ್ಷಗಳಿಂದ ಮಾಡುತ್ತಲೇ ಬರಲಾಗುತ್ತಿದೆ. ಈ ಭಾಗದಲ್ಲಿ ರಸ್ತೆ ದುರುಸ್ಥಿ ಮಾಡುವ ಸಂದರ್ಭದಲ್ಲಿಯೇ ದೊಡ್ಡಹಳ್ಳದಲ್ಲಿ ಸೇತುವೆ ನಿರ್ಮಾಣವನ್ನು ಮಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. 

ರಸ್ತೆ ದುರಸ್ಥಿ ಕುರಿತಂತೆ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಎಂಜಿನಿಯರ್ ತ್ಯಾಗರಾಜ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ರಾಜಕೀಯ

LPG ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

LPG ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ಎಲ್‌ಪಿಜಿ (LPG) ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="120236"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!