ದೊಡ್ಡಬಳ್ಳಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 04 ಅಂಗನವಾಡಿ ಕಾರ್ಯಕರ್ತೆ ಮತ್ತು 14 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್‍ಸೈಟ್ www.anganawadirecruit.kar.nic.in ಮೂಲಕ ಅರ್ಜಿ ಸಲ್ಲಿಸಲು 2020 ರ ಸೆಪ್ಟೆಂಬರ್ 05 ಕೊನೆಯ ದಿನವಾಗಿದೆ.
ಖಾಲಿ ಹುದ್ದೆಗಳ ಹಾಗೂ ಮೀಸಲಾತಿ ವಿವರಗಳಿಗಾಗಿ ವೆಬ್‍ಸೈಟ್ www.anganawadirecruit.kar.nic.in ಅನ್ನು ಮತ್ತು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎ.ಪಿ.ಎಂ.ಸಿ ಬಿಲ್ಡಿಂಗ್ಸ್ ಒಳಾವರಣ, ತುಮಕೂರು ಮುಖ್ಯರಸ್ತೆ, ದೊಡ್ಡಬಳ್ಳಾಪುರ, ದೂ.ಸಂ.: 080-27625228 ಅನ್ನು ಸಂಪರ್ಕಿಸಬಹುದಾಗಿದೆ ಎಂದು ದೊಡ್ಡಬಳ್ಳಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.