ಹೊಸಕೋಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ, 02 ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಹುದ್ದೆ, 02 ಮಿನಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಮತ್ತು 19 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್‍ಸೈಟ್ www.anganawadirecruit.kar.nic.in ಮೂಲಕ ಅರ್ಜಿ ಸಲ್ಲಿಸಲು 2020 ರ ಸೆಪ್ಟೆಂಬರ್ 05 ಕೊನೆಯ ದಿನವಾಗಿದೆ.
ಖಾಲಿ ಹುದ್ದೆಗಳ ಹಾಗೂ ಮೀಸಲಾತಿ ವಿವರಗಳಿಗಾಗಿ ವೆಬ್‍ಸೈಟ್ www.anganawadirecruit.kar.nic.in ಅನ್ನು ಮತ್ತು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಟಿ.ಎ.ಪಿ.ಸಿ.ಎಂ.ಎಸ್ ಆವರಣ, ಹೊಸಕೋಟೆ ದೂ.ಸಂ.: 080-27931493 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.