ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 10 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಉದ್ದೇಶಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಆಗಸ್ಟ್ 11 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ನೇರ ಸಂದರ್ಶನ (ವಾಕ್ ಇನ್ ಇಂಟರ್‍ವ್ಯೂ) ಏರ್ಪಡಿಸಲಾಗಿದೆ.
ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ಎಂ.ಬಿ.ಬಿ.ಎಸ್ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗುವುದು.
ಜಿಲ್ಲೆಯ ದಾವಣಗೆರೆ ತಾಲ್ಲೂಕು ಹೆಬ್ಬಾಳು, ಕಂದಗಲ್ಲು ಗ್ರಾಮದ ಪ್ರಾ.ಆ.ಕೇಂದ್ರ, ಜಗಳೂರು ತಾಲ್ಲೂಕಿನ ಸೊಕ್ಕೆ, ಹಾಲೇಕಲ್ಲು, ಬಿದರೆಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜಗಳೂರಿನ ಸಾರ್ವಜನಿಕ ಆಸ್ಪತ್ರೆ. ಹೊನ್ನಾಳಿ ತಾಲ್ಲೂಕಿನ ನ್ಯಾಮತಿಯ ಸಮುದಾಯ ಆರೋಗ್ಯ ಕೇಂದ್ರ. ಚನ್ನಗಿರಿ ತಾಲ್ಲೂಕು ನಲ್ಲೂರು, ತಣಿಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆರೆಬಿಳಚಿಯ ಸಮುದಾಯ ಆರೊಗ್ಯ ಕೇಂದ್ರಗಳಲ್ಲಿ ತಲಾ ಒಂದು ಹುದ್ದೆ ಭರ್ತಿ ಮಾಡಲಾಗುವುದು.
ಅಭ್ಯರ್ಥಿಗಳು ಆಗಸ್ಟ್ 10 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿಗೆ ಹಾಜರಾಗಿ ಸಂಬಂಧಪಟ್ಟ ವಿಭಾಗದಲ್ಲಿ ವಿದ್ಯಾರ್ಹತೆ ಮತ್ತು ಮೀಸಲಾತಿಯ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಎಸ್.ಎಎಸ್. ಹೈಟೆಕ್ ಆಸ್ಪತ್ರೆ ಹತ್ತಿರ, ಶ್ರೀರಾಮನಗರ ರಸ್ತೆ, ಎನ್.ಸಿ.ಸಿ ಕ್ಯಾಂಪ್ ಪಕ್ಕ, ದಾವಣಗೆರೆ ದೂ.ಸಂ: 08192-237833ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.