ದೊಡ್ಡಬಳ್ಳಾಪುರ: ದೇಶ ಸ್ವಾತಂತ್ರ್ಯಗೊಳ್ಳಲು ಬ್ರಿಟಿಷರ ವಿರುದ್ಧ ಅಸಹಕಾರದ ಧ್ವನಿಯೆತ್ತಿದ ಮಹಾತ್ಮ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿಯ ಮೂಲಕ ನಿರ್ಣಾಯಕ ಹೋರಾಟ ನಡೆಸಿದರು ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೂರು ಬೈರೇಗೌಡ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಕ್ವಿಟ್ ಇಂಡಿಯಾ ಚಳುವಳಿಯ 78ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಿರ್ಣಾಯಕ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬಂಧನಕ್ಕೊಳಗಾಗಿರುವುದು ಇತಿಹಾಸವಾಗಿದೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಅಂಜನಮೂರ್ತಿ,ಕಸಬ ಅಧ್ಯಕ್ಷ ಅಪ್ಪಿ ವೆಂಕಟೇಶ್,ಮಹಿಳಾ ಘಟಕದ ಅಧ್ಯಕ್ಷೆ ಪ್ರಭಾವತಿ,ಓಬಿಸಿ ಘಟಕಾಧ್ಯಕ್ಷ ಪು.ಮಹೇಶ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶ್ರೀನಗರ ಬಶೀರ್,ಎಸ್ ಟಿ ಘಟಕದ ಅಧ್ಯಕ್ಷ ಭೀಮಣ್ಣ,ಮುಖಂಡರಾದ ನಿತಿನ್ ಗೌಡ,ಅಶ್ವತ್ ರೆಡ್ಡಿ ಮತ್ತಿತರಿದ್ದರು.