ನೆರೆಪರಿಹಾರ ಕಾರ್ಯಾಚರಣೆಗೆ ಎಸ್.ಡಿ.ಆರ್.ಎಫ್ ತಂಡ ನಿಯೋಜನೆ / ಜಿಲ್ಲೆಗೆ ಮಳೆಹಾನಿ ಪರಿಹಾರ ಕಾರ್ಯಕ್ಕೆ ರೂ.10 ಕೋಟಿ ಅನುದಾನ ಬಿಡುಗಡೆ-ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ:  ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಲು ಜಿಲ್ಲೆಗೆ ಅಗ್ನಿಶಾಮಕ ದಳ ಹಾಗೂ ಎಸ್.ಡಿ.ಆರ್.ಎಫ್ ತಂಡವನ್ನು ಸರ್ಕಾರದಿಂದ ಜಿಲ್ಲೆಗೆ ನಿಯೋಜಿಸಲಾಗುವುದು ಹಾಗೂ ಮಳೆಹಾನಿ ಹಾಗೂ ನೆರೆಹಾನಿಯ ಪರಿಹಾರ ಕಾರ್ಯಗಳಿಗಾಗಿ ರೂ.10 ಕೋಟಿ ತುರ್ತು ಹಣವನ್ನು ಜಿಲ್ಲೆಗೆ ಬಿಡುಗಡೆಮಾಡಲಾಗಿದೆ ಎಂದು ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,ಈಗಾಗಲೇ ಜಿಲ್ಲಾಡಳಿತ ಬಳಿ ವಿಪತ್ತು ನಿರ್ವಹಣೆಗಾಗಿ ರೂ.6.24 ಕೋಟಿ ಹಣವಿದೆ. ಇಂದು ರೂ.5 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಸರ್ಕಾರ ಇನ್ನೂ ರೂ.5 ಕೋಟಿ ಹಣ ಬಿಡುಗಡೆ ಮಾಡಲಿದೆ. ಅಗತ್ಯವಿದ್ದರೆ ಮತ್ತಷ್ಟು ಅನುದಾನವನ್ನು ಒದಗಿಸಲಾಗುವುದು.  ನೆರೆ ನಿರ್ವಹಣೆಗೆ ಯಾವುದೇ ಹಣಕಾಸಿನ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ವಾಡಿಕೆ ಮಳೆಗಿಂತ ಆಗಸ್ಟ್ ಮೊದಲ ವಾರದಲ್ಲಿ ಹೆಚ್ಚಾಗಿ ಮಳೆಯ ಜೊತೆಗೆ ರಭಸದಗಾಳಿ ಬಿಸಿ  ಬೆಳೆಗಳಿಗೆ ಹಾನಿಯಾಗಿದೆ. ಕೆಲವೆಡೆ ಮನೆಗಳು ಕುಸಿದಿವೆ. ವರದಾ ನದಿಯ ಹರಿಯು ಹೆಚ್ಚಾಗಿ ನದಿ ಪಾತ್ರದ ಹಾವೇರಿ, ಹಾನಗಲ್, ಸವಣೂರ ತಾಲೂಕಿನ ಹಳ್ಳಿಗಳಿಗೆ ಕೆಲ ಜಮೀನುಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ಮನೆ ಹಾನಿ ಕುರಿತು ತಹಶೀಲ್ದಾರಗಳಿಗೆ ಹಾಗೂ ಬೆಳೆಹಾನಿ ಕುರಿತಂತೆ ಪ್ರಾಥಮಿಕ ಸರ್ವೇಗೆ ಕೃಷಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕಳೆದ ಬಾರಿಯ ಪ್ರವಾಹದ ಆಧಾರದ ಮೇಲೆ ತುಂಗಭದ್ರ, ವರದಾ, ಧರ್ಮಾ ನದಿ ಪಾತ್ರದ ಹಳ್ಳಿಗಳು ಸೇರಿದಂತೆ ಮಳೆ ಹಾಗೂ ನೆರೆಯಿಂದ ತೊಂದರೆಗೆ ಸಿಲುಕಬಹುದಾದ 144 ಹಳ್ಳಿಗಳನ್ನು ಗುರುತಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಗ್ರಾಮಗಳ ಜನ, ಜಾನುವಾರುಗಳ ರಕ್ಷಣೆಗೆ ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಅಗತ್ಯಬಿದ್ದರೆ ಸ್ಥಳಾಂತಗೊಳಿಸಿ ತಾತ್ಕಾಲಿಕ ಕಾಳಜಿ ಕೇಂದ್ರದಲ್ಲಿ ಇರಿಸಿ ರಕ್ಷಣೆ ಮಾಡಲು ಜಿಲ್ಲಾಡಳಿತದ ತಂಡ ಸಜ್ಜಾಗಿದೆ. ಈ ಕುರಿತಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮಳೆಯಿಂದ ಹಾನಿಯಾದ ಬೆಳೆಗಳ ಪ್ರಾಥಮಿಕ ಸರ್ವೇ ಜೊತೆಗೆ ಮಣ್ಣು ಕೊಚ್ಚಿಹೋಗಿ ಭೂಮಿ ಹಾಳಾದ ಕುರಿತಂತೆ ಎರಡು ಮಾದರಿಯಲ್ಲಿ ಸರ್ವೇ ನಡೆಸಲು ಕೃಷಿ ಇಲಾಖೆಗೆ ಸೂಚಿಸಲಾಗಿದೆ. ಅತೀವೃಷ್ಟಿಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಒಂದು ತಿಂಗಳ ಪಡಿತರ ನೀಡಲು  ಸೂಚನೆ ನೀಡಲಾಗಿದೆ. ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಓರ್ವ ಅಧಿಕಾರಿಗಳನ್ನು ತಾಲೂಕಾ ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಿ ಪ್ರವಾಹ ನಿಯಂತ್ರಣ ಹಾಗೂ ಸಂತ್ರಸ್ತರ ರಕ್ಷಣೆಗೆ ಪುನರ್ವಸತಿ ಕಾರ್ಯಗಳ ಮೇಲ್ವಿಚಾರಣೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಲೋಕೋಪಯೋಗಿ ಇಲಾಖೆಯ ರಸ್ತೆಗಳು ಮಳೆಯಿಂದ ಹಾನಿಯಾದ ಕುರಿತಂತೆ ಸರ್ವೇಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳ ಬಂಡುಗಳನ್ನು ಸರ್ವೇಮಾಡಿ ಶಿಥಿಲಗೊಂಡಿರುವ ಬಂಡಗಳನ್ನು ಭದ್ರಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಉಗ್ರಾಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ ಇತರರು ಉಪಸ್ಥಿತರಿದ್ದರು.

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]