ತಲಕಾವೇರಿ ಭೂಕುಸಿತ ಪ್ರದೇಶಕ್ಕೆ ಆರ್.ಅಶೋಕ್ ಮತ್ತು ವಿ.ಸೋಮಣ್ಣ ಭೇಟಿ

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಮತ್ತು ಕಂದಾಯ ಸಚಿವರಾದ ಆರ್.ಅಶೋಕ್ ಅವರು ತಲಕಾವೇರಿ ಬಳಿ ಉಂಟಾಗಿರುವ ಭೂಕುಸಿತ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಭೂಕುಸಿತ ಉಂಟಾಗಿರುವ ಬಗ್ಗೆ ಶಾಸಕರಾದ ಕೆ.ಜಿ.ಬೋಪಯ್ಯ ಅವರಿಂದ ಮಾಹಿತಿ ಪಡೆದ ಕಂದಾಯ ಸಚಿವರು       ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು ಎರಡು ದಿನದೊಳಗೆ ಕಾರ್ಯಾಚರಣೆ ಮುಗಿಯಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜನರನ್ನು ನಿಯೋಜಿಸುವಂತೆ ಎಂಜಿನಿಯರ್‍ಗಳಿಗೆ ಸೂಚಿಸಿದರು. 

ಕಾರ್ಯಾಚರಣೆಯನ್ನು ಐದು ತಂಡವಾಗಿ ಮೂರು ಪಾಳಿಯಲ್ಲಿ ನಿರ್ವಹಿಸಬೇಕು. ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್, ಪೊಲೀಸ್, ಅಗ್ನಿಶಾಮಕ ಇಲಾಖೆ, ಗೃಹರಕ್ಷಕದಳ ಹಾಗೂ ಸ್ಥಳೀಯರು ಸೇರಿದಂತೆ 150 ಕ್ಕೂ ಹೆಚ್ಚು ಜನರನ್ನು ನಿಯೋಜಿಸಿಕೊಂಡು  ತ್ವರಿತವಾಗಿ ಕಾರ್ಯಾಚರಣೆ ಕೈಗೊಳ್ಳುವಂತೆ ಲೋಕೋಪಯೋಗಿ ಮತ್ತು ಜಿ.ಪಂ.ಎಂಜಿನಿಯರ್‍ಗಳಿಗೆ ಆರ್.ಅಶೋಕ್ ಸ್ಪಷ್ಟ ನಿರ್ದೇಶನ ನೀಡಿದರು.

ಪ್ರಕೃತಿ ವಿಕೋಪ ನಿರ್ವಹಣೆಗೆ ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಹಣವಿದ್ದು, ಕೇಂದ್ರ ಸರ್ಕಾರ 310 ಕೋಟಿ ರೂ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಈಗ ಪ್ರಕೃತಿ ವಿಕೋಪ ನಿರ್ವಹಣೆಗೆ 5 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್ ಅವರು ವಿವರಿಸಿದರು.

ಪ್ರಕೃತಿ ವಿಕೋಪ ಸಂಬಂಧ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೀಡಿಯೋ ಸಂವಾದವಿದ್ದು, ರಾಜ್ಯದ ಪರಿಸ್ಥಿಯ ಬಗ್ಗೆ ಮಾಹಿತಿ ನೀಡಲಾಗುದು. ಜೊತೆಗೆ ಹೆಚ್ಚಿನ ಹಣ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಆರ್.ಅಶೋಕ್ ಅವರು ತಿಳಿಸಿದರು.ಪ್ರಕೃತಿ ವಿಕೋಪವನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ರಾಜ್ಯದ ಉತ್ತರ ಭಾಗದಲ್ಲಿಯೂ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಗಮನ ಹರಿಸಲಾಗಿದೆ. ಪ್ರಕೃತಿ ವಿಕೋಪದಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮಾತನಾಡಿ ಭೂಕುಸಿತ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಬೆಡ್‍ಶೀಟ್ ಸಿಕ್ಕಿದ್ದು, ದೇಹ ಸಿಗಲಿದೆ. ಕುಟುಂಬದವರಿಗೆ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದರು.

ಘಟನೆ ನಡೆದ ಸ್ಥಳ ಮತ್ತು ಆ ಸ್ಥಳದಿಂದ 65 ಅಡಿ ಕೆಳಗಿನ ಪ್ರದೇಶದಲ್ಲಿ ಎನ್‍ಡಿಆರ್‍ಎಫ್ ಮತ್ತು ಪೊಲೀಸ್ ಇಲಾಖೆಯ ತಂಡ ಶೋಧ ಕಾರ್ಯ ಮುಂದುವರೆಸಿದೆ. ಶೀಘ್ರದಲ್ಲಿಯೇ ಶೋಧ ಕಾರ್ಯ ಮುಗಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.ಕಾರ್ಯಾಚರಣೆಗೆ ಎಲ್ಲರೂ ಸಹಕರಿಸಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಬಡ ಜನರ ಶ್ರೇಯೋಭಿವೃದ್ಧಿಗೆ ಸ್ಪಂದಿಸುವಲ್ಲಿ ಸದಾ ಸಿದ್ಧವಿದೆ ಎಂದು ವಿ.ಸೋಮಣ್ಣ ಹೇಳಿದರು.

ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ, ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡ ಜನರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಕೃಷಿಕರು, ಕಾರ್ಮಿಕರು ಹಾಗೂ ಇತರರಿಗೆ ಎಲ್ಲಾ ರೀತಿಯ ಮೂಲ ಸೌಲಭ್ಯ ಕಲ್ಪಿಸಲು ಮಂದಾಗಿದೆ ಎಂದರು.ಶಾಸಕರಾದ ಕೆ.ಜಿ ಬೋಪಯ್ಯ ಅವರು ಮಾತನಾಡಿ, ಭೂಕುಸಿತ ಪ್ರದೇಶ ಸಂಬಂಧಿಸಿದಂತೆ ಕಂದಾಯ ಸಚಿವರ ಗಮನಕ್ಕೆ ತಂದರು ಶಾಸಕರಾದ ಅಪ್ಪಚ್ಚು ರಂಜನ್ ಅವರು ಕಾರ್ಯಾಚರಣೆ ಬಗ್ಗೆ ಹಲವು ಸಲಹೆ ನೀಡಿದರು.ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೂಕುಸಿತ ಪ್ರದೇಶದಲ್ಲಿ ಕೈಗೊಳ್ಳಲಾಗಿರುವ ಕಾರ್ಯಾಚರಣೆ ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು. 

ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಲೋಕೋಪಯೋಗಿ ಇಇ ಮದನ್ ಮೋಹನ್, ಜಿ.ಪಂ.ಇಇ ಪ್ರಭು, ತಹಶೀಲ್ದಾರ್ ಮಹೇಶ್, ಡಿವೈಎಸ್‍ಪಿ ದಿನೇಶ್ ಕುಮಾರ್ ಇತರರು ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!