ದೊಡ್ಡಬಳ್ಳಾಪುರ: 2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ನಗರದ ಶ್ರೀ ದೇವರಾಜ್ ಅರಸ್ ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ ದೊರಕಿದೆ.
ಶಾಲೆಯ 45 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ.ಅಲ್ಲದೆ,ಅತ್ಯುನ್ನತ ಶ್ರೇಣಿಯಲ್ಲಿ 16,ಪ್ರಥಮ ಶ್ರೇಣಿಯಲ್ಲಿ 29 ವಿಧ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಶಾಲೆಗೆ ಉತ್ತಮ ಫಲಿತಾಂಶ ದೊರಕಿಸಿದ ವಿದ್ಯಾರ್ಥಿಗಳನ್ನು ಶ್ರೀ ಆರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಿ.ಹೆಚ್.ನಾಗರಾಜ, ನಿರ್ದೇಶಕ ಜೆ.ರಾಜೇಂದ್ರ, ಮುಖ್ಯಶಿಕ್ಷಕ ಝಿಯಾಉಲ್ಲಾ ಅಭಿನಂದನೆ ಸಲ್ಲಿಸಿದ್ದಾರೆ.