ದೊಡ್ಡಬಳ್ಳಾಪುರ: ಕರೊನಾ ಆತಂಕದ ನಡುವೆಯೂ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.
ಚಿಕ್ಕಬಳ್ಳಾಪುರ,ಬೆಂಗಳೂರು ಗ್ರಾಮಾಂತರ, ಮಧುಗಿರಿ ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದಿದ್ದರೆ ಯಾದಗಿರಿ ಕೊನೆಯ ಸ್ಥಾನವನ್ನು ಪಡೆದಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರವನ್ನು ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾಗಿದ್ದ 8,11,050 ವಿದ್ಯಾರ್ಥಿಗಳ ಪೈಕಿ 5,82, 360 ಮಂದಿ ಉತ್ತೀರ್ಣರಾಗಿದ್ದಾರೆ. 2,28,734 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. 625ಕ್ಕೆ 625 ಅಂಕ ಪಡೆದ 6 ಮಕ್ಕಳು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.ಕಳೆದಬಾರಿ ಇಬ್ಬರು ಮಾತ್ರ 625ಕ್ಕೆ 625 ಅಂಕ ಪಡೆದಿದ್ದರು.ಕಳೆದ ವರ್ಷ ಶೇ. 73.70 ಫಲಿತಾಂಶ ಬಂದಿತ್ತು. ಕಳೆದ ವರ್ಷಕ್ಕಿಂತ ಈ ವರ್ಷ ಶೇ.1.9 ರಷ್ಟು ಕಡಿಮೆ ಫಲಿತಾಂಶ ಬಂದಿದೆ.