ಧೈರ್ಯ ಮಾಡಿ ಕೇಂದ್ರದಿಂದ ಬಾಕಿ ಪರಿಹಾರ ಕೇಳಿ – ಸಿದ್ದರಾಮಯ್ಯ

ಬೆಂಗಳೂರು: ಅತಿವೃಷ್ಟಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ.

ಕಳೆದ ಬಾರಿ‌ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು ಎಂದು‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ‌ ನೀಡಿದ್ದಾರೆ.

ಪ್ರಧಾನಿಗಳು ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು  ಆರ್. ಅಶೋಕ್ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ರೂ.1,00,000 ಕೋಟಿ. ರಾಜ್ಯಸರ್ಕಾರದ ವರದಿ ಪ್ರಕಾರ ನಷ್ಟ- ರೂ 50,000 ಕೋಟಿ. ಪರಿಹಾರ ಕೇಳಿದ್ದು

ರೂ.35,000 ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ.

ಕಳೆದ ವರ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರು  ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ. ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಪ್ರಧಾನಿ ಮೋದಿ ಅವರ ಗಮನಕ್ಕೆ ತರಬೇಕು. ಪ್ರಧಾನಿಗಳು ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್, ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ. ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ.

ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ. ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ. 15ನೇ ಹಣಕಾಸು ಆಯೋಗ ರಾಜ್ಯಕ್ಕೆ ರೂ.5495 ಕೋಟಿ ವಿಶೇಷ ಅನುದಾನದ ಶಿಫಾರಸು ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿ ಆ ಅನುದಾನ ರಾಜ್ಯಕ್ಕೆ ಸಿಗದಂತೆ ಮಾಡಿದ್ದಾರೆ. ಈ ಅನ್ಯಾಯವನ್ನು ಕೂಡಾ ರಾಜ್ಯದ ಸಚಿವರು ಇಂದಿನ‌ ಸಭೆಯಲ್ಲಿ ಪ್ರಧಾನಿಗಳ ಗಮನಕ್ಕೆ ತರಬೇಕು.

ರಾಜ್ಯದ‌‌ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ  ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು. ಪ್ರಧಾನಿ ಅವರ ಜೊತೆಗಿನ ರಾಜ್ಯದ ಸಚಿವರ ಸಭೆ ಕಾಟಾಚಾರದ ಕಸರತ್ತು ಆಗಬಾರದು. ಮುಖ್ಯಮಂತ್ರಿಗಳು ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಿ ಪ್ರಧಾನಿ ಅವರಿಗೆ ಕಳಿಸಿಕೊಟ್ಟು ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.

ಈ ವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು ಪ್ರಧಾನಿ ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ ಮುಖ್ಯಮಂತ್ರಿಗಳು ಇಲ್ಲವೇ ಸಚಿವರಿಗಿಲ್ಲ. ಇದಕ್ಕಾಗಿ, ಹೆಚ್ಚಿನ ಪರಿಹಾರ‌ ಕೋರಲು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ‌ ಕೊಂಡೊಯ್ಯಬೇಕು ಎಂದು ಸಲಹೆ‌ ನೀಡಿದ್ದಾರೆ.

ರಾಜಕೀಯ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ ಬೊಮ್ಮಾಯಿ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ

ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ (LPG) ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು

[ccc_my_favorite_select_button post_id="120114"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!