ದೊಡ್ಡಬಳ್ಳಾಪುರ: ತಾಲೂಕಿನಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ಶ್ರೀ ಕೃಷ್ಣ ಹಾಗೂ ವೇಣುಗೋಪಾಲ ದೇವಾಲಯಗಳಲ್ಲಿ ಕೊವಿಡ್-19 ಸೋಂಕು ಹರಡುತಿರುವ ಹಿನ್ನಲೆಯಲ್ಲಿ ಸರಳವಾಗಿ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವಾಲಯಗಳಲ್ಲಿ ವಿಶೇಷ :
ಕೆರೆಬಾಗಿಲು ರಸ್ತೆಯಲ್ಲಿನ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ವಿಶೇಷ ತೊಟ್ಟಿಲು ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಎಚ್.ವಿ.ವಿ ಟ್ರಸ್ಟ್ ಸದಸ್ಯರು ಪೂಜಾ ನೇತೃತ್ವ ವಹಿಸಿದ್ದರು.
ಸಾಂಪ್ರದಾಯಿಕ ಆಚರಣೆ ಮಾಡುವವರ ಮನೆಗಳಲ್ಲಿ ಶ್ರೀ ಕೃಷ್ಣನ ಪೂಜೆ ಮಾಡುವುದರೊಂದಿಗೆ,ಸಹಿ ಹಂಚಿ,ಮಕ್ಕಳಿಗೆ ಕೃಷ್ಣ ರಾಧೆ ವೇಷ ತೊಡಿಸಿ, ಸಂಭ್ರಮಿಸುತ್ತಿದ್ದ ದೃಶ್ಯ ಕಂಡು ಬಂದಿತು.
ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಗರದ ಕುಚ್ಚಪ್ಪನಪೇಟೆಯಲ್ಲಿರುವ ವೇಣುಗೋಪಾಲಸ್ವಾಮಿ,ತಾಲೂಕಿನ ತಪಸಿಹಳ್ಳಿಯ ವೇಣುಗೋಪಾಲ ಸ್ವಾಮಿ,ತೂಬಗೆರೆಯ ಯಡ್ಡೇಲಹಳ್ಳಿಯ ವೇಣುಗೋಪಾಲ ಸ್ವಾಮಿ,ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪೂಜಾ ಕಾರ್ಯಿಕ್ರಮಗಳನ್ನು ಏರ್ಪಡಿಸಲಾಗಿತ್ತು.