ದೊಡ್ಡಬಳ್ಳಾಪುರ : ಕೋವಿಡ್-19/ ಕರೊನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ “ಶ್ರೀ ಕೃಷ್ಣ ಜಯಂತಿ”ಯನ್ನು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು.
“ಶ್ರೀ ಕೃಷ್ಣ” ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.