ಶ್ರೀ ಕೃಷ್ಣನ ಉದಾತ್ತ ಮೌಲ್ಯಾದರ್ಶಗಳು ನಮ್ಮೆಲ್ಲರಿಗೂ ಮಾದರಿ: ಸಚಿವ ಸಿ.ಟಿ ರವಿ

ಚಿಕ್ಕಮಗಳೂರು: ಭಾರತೀಯ ಇತಿಹಾಸ ಪುರಾಣದಲ್ಲಿ ವಿಶೇಷ ಉದಾತ್ತ ಮೌಲ್ಯಗಳ ವ್ಯಕ್ತಿತ್ವ ಹೊಂದುವ ಮೂಲಕ ರಾಜನೀತಿ ನಿಪುಣನಾಗಿ ಧರ್ಮದ ಪರಿಪಾಲಕ ಶ್ರೀಕೃಷ್ಣ ನಮ್ಮೆಲ್ಲರಿಗೂ ಮಾದರಿ ಎಂದು ಪ್ರವಾಸೋದ್ಯಮ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ  ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಪುರಾಣದಲ್ಲಿ ವಿಶೇಷ ವ್ಯಕ್ತಿತ್ವ ಹೊಂದಿದ ವ್ಯಕ್ತಿಗಳಲ್ಲಿ ಶ್ರೀ ಕೃಷ್ಣ ಪರಮಾತ್ಮ ಕೂಡ ಒಬ್ಬರು ಜಾಗತಿಕವಾಗಿ ಸ್ನೇಹ -ಸೌಹಾರ್ದಯುತವಾದ ಉದಾತ್ತ ಮೌಲ್ಯ ಗುಣಗಳನ್ನು  ಹೊಂದಿ ಶ್ರೇಷ್ಟ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ, ಯಾವುದೇ ಪದವಿಗೆ ವ್ಯಾಮೋಹ ಹೊಂದದೆ ಧರ್ಮದ ಪರಿಪಾಲಕನಾಗಿ ಮಹಾಭಾರತದಲ್ಲಿ ತನ್ನದೇ ಪಾತ್ರ ವಹಿಸಿ ಜನರ ಮನದಲ್ಲಿ ಉಳಿದ  ಮಹಾನ್ ವ್ಯಕ್ತಿ ಎಂದರು.

ಮಹಾಭಾರತದಲ್ಲಿ ಶ್ರೀ ಕೃಷ್ಣನ ಜೀವನ ಚರಿತ್ರೆ ಅಧ್ಯಯನ ಮಾಡಿದಲ್ಲಿ ಆತನ ರಾಜನೀತಿ ಆಡಳಿತ, ಧರ್ಮದ ಪರವಾಗಿ ನಿಲ್ಲುವುದು ಸೇರಿದಂತೆ ಉತ್ತಮ ಮೌಲ್ಯಯುತ ಅಂಶಗಳು ನಮ್ಮೆಲ್ಲರಿಗೂ ಮಾದರಿಯಾಗಲಿದೆ, ರಾಜಸೂಯ ಯಾಗದಲ್ಲಿ ಶ್ರೀ ಕೃಷ್ಣನಿಗೆ ಅಗ್ರ ಪೂಜೆ ಆದರೂ ಯಾವುದೇ ಅಹಂ ಇಲ್ಲದೇ ನಿಷ್ಠೆ ತೋರಿದ ವ್ಯಕ್ತಿತ್ವ ಜೊತೆಗೆ ಯುದ್ಧದಲ್ಲಿ ಯಾವುದೇ ಶಸ್ತ್ರ ಹೊಂದದೇ ಪಾಂಡವರ ಪರ ಧೂತನಾಗಿ ಕೌರವರ ಮನವೊಲಿಸುವ ಕಾರ್ಯ ಮಾಡಿದವನು ದ್ರೌಪದಿಯ ವಸ್ತ್ರಾಪಹರಣವಾಗಿ ಸಂಕಷ್ಟದಲ್ಲಿದ್ದಾಗ ಆಕೆಯ ಸಹಾಯಕ್ಕೆ ಬಂದವನು ಪೌರಾಣಿಕ ಅತ್ಯುತ್ತಮ ಮೌಲ್ಯ ಹೊಂದಿದ ವ್ಯಕ್ತಿಯಾಗಿ ಶ್ರೀ ಕೃಷ್ಣ ಪರಮಾತ್ಮ ಗುರ್ತಿಸಿಕೊಂಡಿದ್ದಾನೆ ಎಂದರು.

ರಾಮಾಯಣ ಮತ್ತು ಮಹಾಭಾರತ ಪೂರ್ವಿಕರು ನಾಡಿಗಾಗಿ ನೀಡಿರುವ ಉದಾತ್ತ ಮೌಲ್ಯಗಳ ಸಂಗ್ರಹವಾಗಿದೆ ಎಂದ ಅವರು ಶ್ರೀ ಕೃಷ್ಣ ಹಾಗೂ ಪುರಾಣದಲ್ಲಿರುವ ವಿಚಾರಧಾರೆಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಎಂದಿಗೂ ಸೋಲಿಲ್ಲ ಧರ್ಮದ ಪರಿಪಾಲಕನಾಗಿ ಹೋರಾಡುವ ಆತನ ವ್ಯಕ್ತಿತ್ವ, ರಾಜನೀತಿ ಆಡಳಿತ ಇಂದಿನ ಸಮಾಜಕ್ಕೆ ಮಾದರಿಯಾಗಲಿದೆ ಧರ್ಮ ಎಂಬುದು ಕೇವಲ ಒಂದು ಮತವಲ್ಲ ಅದು  ಎಲ್ಲರ ಒಳಿತನ್ನು ಬಯಸುವ ಉದಾರ ಮೌಲ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್. ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇಶಕ ಡಾ. ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]