ದೊಡ್ಡಬಳ್ಳಾಪುರ: ಕರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರುಗಳು ಮಾತ್ರ ಶಾಲೆಗಳಿಗೆ ಹಾಜರಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.
ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಬಿಇಒಗಳಿಗೆ ನೀಡಿರುವ ಆದೇಶದ ಪತ್ರದಲ್ಲಿ 2020ನೇ ಸಾಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ
ಪ್ರತಿ ವರ್ಷ ಆಗಸ್ಟ್ 15 ರಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು,ಇದು ಅತ್ಯಂತ ಪ್ರಾಮುಖ್ಯದ ದಿನವಾಗಿರುತ್ತದೆ.ಕರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರುಗಳು ಮಾತ್ರ ಶಾಲೆಗಳಿಗೆ ಹಾಜರಾತಿ ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸೂಚಿಸಿರುವ ನಿರ್ದೇಶನಗಳನ್ನು ಪಾಲಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಶಿಷ್ಟಾಚಾರದೊಂದಿಗೆ ಆಚರಿಸಲು ಸೂಚಿಸಿದ್ದಾರೆ.