ದೊಡ್ಡಬಳ್ಳಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2019 ರಿಂದ 31.12.2019) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಲ್ಲಿ ಪಡೆದು, ಸಹಾಯಕ ನಿರ್ದೇಶಕರ ದೃಢೀಕರಣದೊಂದಿಗೆ, ವೆಬ್‍ಸೈಟ್ http://karunadu.karnataka.gov.in/dyes ಮೂಲಕ ಆನ್‍ಲೈನ್‍ನಲ್ಲಿ ದಾಖಲೆಗಳನ್ನು ಅಪ್‍ಲೋಡ್ ಮಾಡಲು 2020ರ ಆಗಸ್ಟ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಇ-ಮೇಲ್: bangaloreruralyouthservices@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.