ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು: ಕೃಷಿ ಸಚಿವ ಬಿ‌.ಸಿ.ಪಾಟೀಲ್

ಬೆಂಗಳೂರು: ರೈತ ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು.ಬೆಳೆ ಸಮೀಕ್ಷೆಯನ್ನು ಯಶಸ್ವಿಯನ್ನಾಗಿಸಿ ಸರ್ಕಾರದ ಉತ್ಸವವನ್ನಾಗಿಸುವ ದೊಡ್ಡಮಟ್ಟದ ಸವಾಲು ಎಲ್ಲರ ಮುಂದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲರು ಹೇಳಿದ್ದಾರೆ.

ಕೃಷಿ ಇಲಾಖೆಯ ಸಮೃದ್ಧಿ ಸಭಾಂಗಣದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಕೆವಿಕೆ ಸೇರಿದಂತೆ ಕೃಷಿ ಅಧಿಕಾರಿಗಳ ಜೊತೆ ಕೃಷಿ ಸಚಿವರು, ಸರ್ಕಾರದ ಮುಖ್ಯಕಾರ್ಯದರ್ಶಿಗಳ ಜೊತೆ ವಿಡಿಯೋ ಸಂವಾದ ನಡೆಸಲಾಯಿತು.

ಬೆಳೆ ಸಮೀಕ್ಷೆ ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆಯ ಕೆಲಸವೆಂದು ವರ್ಗೀಕರಿಸುವುದು‌ ಬೇಡ‌.ಇದು ಸರ್ಕಾರದ ಕೆಲಸವೆಂದು ಒಗ್ಗಟ್ಟಾಗಿ ಎಲ್ಲರೂ ಪಾಲ್ಗೊಂಡು ಬೆಳೆ ಸಮೀಕ್ಷೆಯನ್ನು ಆಯಾ ರೈತರಿಂದಲೇ ಮಾಡಿಸಿಅಪ್ಲೋಡ್ ಮಾಡಿಸಬೇಕು‌.

ಸ್ವಾಭಿಮಾನಿ ರೈತ ತನ್ನ ಹೊಲದ ಸಮೀಕ್ಷೆಯನ್ನು ತಾನೇ ನಡೆಸಿ ರೈತನೇ ಸರ್ಟಿಫಿಕೇಟ್ ಕೊಡುವಂತಹ ವಿಶೇಷ ಯೋಜನೆಯಿದು. ತಾಲೂಕಿನ ಎಡಿಎಗಳು ಸ್ಥಳೀಯ ಶಾಸಕರನ್ನು ರೈತರ ಹೊಲಕ್ಕೆ ಕರೆದುಕೊಂಡು ಹೋಗಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಫೋಟೋ ಅಪ್ಲೋಡ್ ಮಾಡಿಸಬೇಕು.ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ಪ್ರೊಪೆಸರ್‌ಗಳನ್ನು ಸಹಾಯಕ ಪ್ರೊಪೆಸರ್‌ಗಳನ್ನು ಸಹ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಚಾರಕ್ಕೆ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್ ರಚಿಸಿ ಕೃಷಿ ತೋಟಗಾರಿಕಾ ವಿದ್ಯಾರ್ಥಿಗಳು ರೈತರು ಬೆಳೆಸಮೀಕ್ಷೆ ಆಪ್ ಡೌನ್ಲೋಡ್ ಬೆಳೆ ವಿವರ ಅಪ್ಲೋಡ್ ಮಾಡಲು ನೆರವಾಗುವಂತೆ ಹೇಳಬೇಕು. ಸಾಮಾಜಿಕ ಜಾಲತಾಣಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು, ಸಹಕಾರಿ ಸಂಘಗಳು ಹಾಲು ಉತ್ಪಾದಕ ಸಂಘಗಳ ಪ್ರತಿನಿಧಿಗಳನ್ನು ಹಾಗೂ ಕೃಷಿ ಇಲಾಖೆಯಲ್ಲಿರುವ ಹತ್ತು ಸಾವಿರ ಅಧಿಕಾರಿಗಳನ್ನು ಬಳಸಿಕೊಂಡು ಹೆಚ್ಚೆಚ್ಚು ಬೆಳೆ ಸಮೀಕ್ಷೆಯಾಗುವಂತೆ ನೋಡಿಕೊಳ್ಳಬೇಕು.ಬೆಳೆ ಸಮೀಕ್ಷೆ ಆ್ಯಪ್ ಹಾಗೂ ರೈತರೇ ತಮ್ಮ ಬೆಳೆ ಸಮೀಕ್ಷೆ ವಿವರ ದಾಖಲಿಸುವಂತೆ ಮಾಡಬೇಕು.ರೈತರೇ ನೇರವಾಗಿ ಆ್ಯಪ್‌ನಲ್ಲಿ ವಿವರ ದಾಖಲಿಸುವಂತೆ ಮಾಡಬೇಕು.ಇದು ಬೆಳೆ ಸಮೀಕ್ಷೆ ಸರ್ಕಾರದ ಹಬ್ಬವಾಗಬೇಕು.ಇದಕ್ಕಾಗಿಯೇ ಬೆಳೆ ಸಮೀಕ್ಷೆಯನ್ನು ಉತ್ಸವ-2020 ಎಂದು ಕರೆಯಲಾಗಿದೆ ಎಂದು ಸಚಿವರು ವಿವರಿಸಿದರು‌.

ವಿಡಿಯೋ ಸಂವಾದವನ್ನುದ್ದೇಶಿಸಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್,ಕಳೆದ ಮೂರು ವರ್ಷಗಳಿಂದ ತಂತ್ರಜ್ಞಾನದ ಮೂಲಕ ಬೆಳೆ ಸಮೀಕ್ಷೆ ರಾಜ್ಯದಲ್ಲಿ ಯಶಸ್ವಿಯಾಗುತ್ತಾ ಬಂದಿದೆ.ರಾಷ್ಟ್ರೀಯಮಟ್ಟದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕದ ಬೆಳೆ ಸಮೀಕ್ಷೆಗೆ ಉತ್ತಮ ಪ್ರಶಂಸೆ ದೊರೆತಿದೆ.ಕೇಂದ್ರದ ಕಾರ್ಯದರ್ಶಿಗಳಿಗೆ ರಾಜ್ಯದ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿತ್ತು. ಬೆಳೆ ಆ್ಯಪ್ ಬಳಕೆ, ಪ್ರಯೋಜನ, ರೈತರಿಗಾಗುವ ಲಾಭ,ಇಲಾಖೆಗಾಗುವ ಆರ್ಥಿಕ ಲಾಭವನ್ನು ಕಂಡು ಕೇಂದ್ರ ಸರ್ಕಾರ ಕರ್ನಾಟಕದಲ್ಲಿನ ಬೆಳೆ ಸಮೀಕ್ಷೆ ಆ್ಯಪ್ ಅನ್ನು ದೇಶದ ಇತರೆ ರಾಜ್ಯಗಳಿಗೂ ವಿಸ್ತರಿಸಲು ಮುಂದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ತಂತ್ರಜ್ಞಾನವನ್ನು ಬಳಸಿ ಬೆಳೆ ಸಮೀಕ್ಷೆ ಮಾಡಿರುವುದು ಬಹಳ ಲಾಭದಾಯಕಾರಿಯಾಗಿದ್ದು, ತಂತ್ರಜ್ಞಾನದ ಬೆಳೆ ಸಮೀಕ್ಷೆಯಿಂದ ಸುಮಾರು 7ಲಕ್ಷ ಮೆಕ್ಕೆಜೋಳ ಬೆಳೆದ ರೈತರ ಖಾತೆಗೆ ನೇರವಾಗಿ ಸರ್ಕಾರದ ಸಹಾಯಧನ ವರ್ಗಾಯಿಸಲು ಅನುಕೂಲವಾಗಿದೆ.ಅದರಂತೆ ಹಣ್ಣು,ಹೂವು,ತರಕಾರಿ ಬೆಳೆದ ರೈತರಿಗೆ ಸೂಕ್ತ ಪ್ಯಾಕೇಜ್ ಘೋಷಿಸಲು ಸಹಾಯಕವಾಯಿತು‌.ರೈತರು ಮನೆಯಿಂದ ಹೊರಗೆ ಹೋಗದೇ ಅವರ ಖಾತೆಗೆ ಹಣ ಜಮೆಯಾಗಲು ಈ ತಂತ್ರಜ್ಞಾನದಿಂದ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕಳೆದ ವರ್ಷ 2 ಕೋಟಿ 10 ಲಕ್ಷ ಸರ್ವೆ ನಂಬರ್ ಗಳನ್ನು ಸಮೀಕ್ಷೆ ನಡೆಸಲಾಗಿದೆ.ಈ ವರ್ಷ ರೈತ ಬೆಳೆ ಸಮೀಕ್ಷೆ ಆ್ಯಪ್ ಬಳಸಿ ಕಳೆದ ವರ್ಷಕ್ಕಿಂತಲೂ ಇನ್ನೂ 

ಹೆಚ್ಚಿನ ಬೆಳೆ ಸಮೀಕ್ಷೆ ನಡೆಸಬೇಕೆಂದು ವಿಜಯ್ ಭಾಸ್ಕರ್ ಅವರು ಸೂಚಿಸಿದರು.

ಕೃಷಿ ಇಲಾಖೆ ನಿರ್ದೇಶ ಶ್ರೀನಿವಾಸ್ ಪ್ರಾಸ್ತಾವಿಕ ಮಾತನಾಡಿ, ಬೆಳೆ ಸಮೀಕ್ಷೆ ಯಶಸ್ವಿಯಾಗುವಂತೆ ಎಲ್ಲರೂ ನೋಡಿಕೊಳ್ಳಬೇಕು.ಆಗಸ್ಟ್ 24ರೊಳಗೆ ಸಮೀಕ್ಷೆ ಪೂರ್ಣ ಹಾಗೂ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು.ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗಿನ ಎಲ್ಲಾ ಸಮಿತಿಗಳು ಸಮೀಕ್ಷೆಯ ಸಫಲತೆ ಹಾಗೂ ಪೂರ್ಣತೆಗೆ ದುಡಿಯಬೇಕೆಂದು ಕರೆ ನೀಡಿದರು.

ರಾಜಕೀಯ

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="105939"]
ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ನ್ಯಾಯ ಪಡೆಯುವುದು ಈಗ ದುಬಾರಿಯಾಗಿದ್ದು, ಅನೇಕರಿಗೆ ಹಣವಿಲ್ಲದೆ ನ್ಯಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ಅನ್ಯಾಯವಾಗುತ್ತದೆ. ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ Cmsiddaramaiah

[ccc_my_favorite_select_button post_id="105901"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಕಳ್ಳತನ ಮತ್ತು ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಕರೆದುಕೊಂಡು ಹೋಗುವಾಗ ಪರಾರಿಯಾಗುವ ಭರದಲ್ಲಿ ವಾಹನದಿಂದ ಜಿಗಿದು ಒಬ್ಬ ಸಾವನ್ನಪ್ಪಿರುವ (dies)

[ccc_my_favorite_select_button post_id="105926"]
ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ಅಪರಿಚಿತ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಕೂಲಿ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಗರದ ಎಪಿಎಂಸಿ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="105861"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!