ಎಸ್ ಡಿ ಪಿಐ / ಪಿಎಫ್ ಐ ನಿಷೇಧಕ್ಕೆ ರಾಜ್ಯಪಾಲರಿಗೆ‌ ಮನವಿ ಸಲ್ಲಿಸಿದ ದೊಡ್ಡಬಳ್ಳಾಪುರದ ಬಜರಂಗದಳದ ಕಾರ್ಯಕರ್ತರು

ದೊಡ್ಡಬಳ್ಳಾಪುರ: ಡಿಜಿ ಹಳ್ಳಿ ,ಕೆಜಿ ಹಳ್ಳಿ ಪುಲಕೇಶಿನಗರದಲ್ಲಿ ನಡೆದ ದುರ್ಘಟನೆ ಪೂರ್ವ ನಿಯೋಜಿತ ಮತ್ತು ದುರುದ್ದೇಶಿತವಾಗಿದ್ದು,ಈ ಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರೆನ್ನಲಾಗಿರುವ ಎಸ್ ಡಿ ಪಿಐ / ಪಿಎಫ್ ಐ ನಿಷೇಧಿಸಬೇಕೆಂದು ಒತ್ತಾಯಿಸಿ ಬಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ‌ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಬಜರಂಗದಳದ ತುಮಕೂರು ವಿಭಾಗ ಸಂಚಾಲಕ್ ನರೇಶ್ ರೆಡ್ಡಿ, ಆ.11 ರಂದು ಬೆಂಗಳೂರಿನ ದೇವರು ಜೀವನ ಮಾಡುವ ಹಳ್ಳಿ (ಡಿ. ಜೆ.ಹಳ್ಳಿ) ಕೆ. ಜಿ ಹಳ್ಳಿ ಪುಲಕೇಶಿನಗರಗಳಲ್ಲಿ ನಡೆದ ಘಟನೆ ಪೂರ್ವನಿಯೋಜತವಾಗಿದ್ದು,ದೂರು ನೀಡುವ ನೆಪದಲ್ಲಿ ಎಸ್ ಡಿಪಿಐ/ ಪಿಎಫ್ ಐ ಕಾರ್ಯಕರ್ತರು ಗಲಭೆ ಸೃಷ್ಟಿಸಿ ಪೊಲೀಸರು, ಪತ್ರಕರ್ತರು ಹಾಗೂ ಅಮಾಯಕ ಹಿಂದುಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.ಅಲ್ಲದೆ,ಪೊಲೀಸ್ ಠಾಣೆ,ವಾಹನಗಳ ನಾಶ,ಹಿಂದುಗಳ ಮನೆ ನಾಶ ಮಾಡಿರುವ ಈ ಭಯೋತ್ಪಾದಕ ಪುಂಡರ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ್ ಮಧು ಬೇಗಲಿ ಮಾತನಾಡಿ,ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪೊಲೀಸರಿಗೆ ಮಾಹಿತಿ ನೀಡದೆ ತಾನೊಬ್ಬ ಜನಪ್ರತಿನಿಧಿ ಎಂಬುದನ್ನು ಮರೆತು ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ವಿಫಲರಾಗಿದ್ದಾರೆ. ಈ ಕೂಡಲೇ ಪೊಲೀಸರು ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಗಲಭೆಕೊರರನ್ನು ಬಂಧಿಸಿ ವಿಚಾರಣೆ ನಡೆಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು.ಮತ್ತು ಪೂರ್ವನಿಯೋಜಿತ ಮತ್ತು ದುರುದ್ದೇಶಿತವಾಗಿ ಮಾಡಿರುವ ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ SDPI/PFI ಸಂಘಟನೆಯ ಮೇಲೆ ನಿರ್ಬಂಧ ಹೇರಬೇಕೆಂದರುಮ

ಈ ವೇಳೆ ತಾಲೂಕು ಸಂಚಾಲಕ ಭಾಸ್ಕರ್,ಸಹಸಂಚಾಲಕ್ ಮಹೇಶ್,ನಗರ ಸಹ ಸಂಚಾಲಕ್ ವೀರರಾಜು,ಸತ್ಸಂಗ ಪ್ರಮುಖ್ ಕುಶಲ್, ಘಟಕ ಸಂಚಾಲಕ್ ನವೀನ್, ಕಾರ್ಯಕರ್ತರಾದ ತೇಜು, ಪುನೀತ್, ರಾಜೇಶ್ ಮತ್ತಿತರಿದ್ದರು.

ಇದಕ್ಕು‌ ಮುನ್ನ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಬಳಿ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!