ಚೆನ್ನೈ: ಆಗಸ್ಟ್ 5 ರಿಂದ ಕೋವಿಡ್-19 ನ ಲಕ್ಷಣಗಳಿಗಾಗಿ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ದಾಖಲಾಗಿದ್ದ ಖ್ಯಾತ ಹಿನ್ನಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಹಿನ್ನಡೆ ಉಂಟಾಗಿದೆ ಎಂದು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ವರದಿ ಬಿಡುಗಡೆ ಮಾಡಿದೆ.
ಆಗಸ್ಟ್ 13 ರಂದು ತಡರಾತ್ರಿ ನಡೆದ ಬೆಳವಣಿಗೆಯಲ್ಲಿ, ಬಾಲಸುಬ್ರಹ್ಮಣ್ಯಂ ಅವರ ಸ್ಥಿತಿ ಹದಗೆಟ್ಟಿತು ಮತ್ತು ಅವರೊಂದಿಗೆ ಹಾಜರಾದ ತಜ್ಞ ವೈದ್ಯಕೀಯ ತಂಡದ ಸಲಹೆಯ ಆಧಾರದ ಮೇಲೆ,ಅವರನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.