ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಗ್ರಾಪಂಗಳಿಗೆ ಪ್ರಧಾನ ಕಾರ್ಯದರ್ಶಿ ಅತೀಕ್ ಭೇಟಿ / ಪರಿಶೀಲನೆ

ದೊಡ್ಡಬಳ್ಳಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅತೀಕ್ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಯೋಜನೆ, ಎಸ್ ಡಬ್ಲ್ಯೂ ಎಂ ಯೋಜನೆ, ಹಾಗೂ ಇತರ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಪುರ ಗ್ರಾಮದ ಜಲಾಮೃತ ಕೆರೆ,ಕಣಿವೆಪುರ ಗ್ರಾಮದ ದಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕ, ಸೀಗೆಹಳ್ಳಿ ಗ್ರಾಮದ ರೇಷ್ಮೆ ಕೃಷಿ ತೋಟದ ಅಭಿವೃದ್ಧಿ ಕಾಮಗಾರಿ.

ಮೆಳೆಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಳೆಕೋಟೆ ಗ್ರಾಮದ  ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ಉದ್ಯಾನವನ, ಮಳೆ ನೀರಿನ ಕೊಯ್ಲು ,ಮುಕ್ಕೇನ ಹಳ್ಳಿ ಗ್ರಾಮದ ಅಂಗನವಾಡಿ ಕಟ್ಟಡ, ಲಿಂಗನಹಳ್ಳಿ ಗೇಟ್ ಹತ್ತಿರ ರಸ್ತೆ ಬದಿ ಗಿಡ ನೆಡುವ ಕಾಮಗಾರಿ,ರಾಜಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜಘಟ್ಟ ಗ್ರಾಮದಲ್ಲಿ ನಿರ್ಮಿಸಲಾಗಿರುವ ರಿಚಾರ್ಜ್ ಫಿಟ್ ಹಾಗೂ ಒಕ್ಕಣೆ ಕಣ ಕಾಮಗಾರಿ,ಹಾಗೆಯೇ ಮಜರಾ ಹೊಸಹಳ್ಳಿ  ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಸಮುದಾಯ ಶೌಚಾಲಯ ಕಾಮಗಾರಿ, ಜಿಂಕೆಬಚ್ಚಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕ, ಜಿಂಕೆಬಚ್ಚಹಳ್ಳಿ ಗ್ರಾಮದ ಸೆಮಿ ಇಂಟಿಗ್ರೇಟೆಡ್ ಸೋಲಾರ್ ಸಿಸ್ಟಮ್, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿಯಲ್ಲಿ ನಿರ್ಮಿಸಲಾಗಿರುವ ಡಿಜಿಟಲ್ ಲೈಬ್ರರಿ, ಮತ್ತು ಸೆಂಟ್ರಲೈಸ್ಡ್ ಸೋಲಾರ್ ಸಿಸ್ಟಂ ಪರಿಶೀಲಿಸಿದರು.

ಈ ವೇಳೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತ ಮಂಜುನಾಥ್,ತಾಪಂ ಇಒ ಹೆಚ್.ಮುರುಡಯ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರಾದ ಯೋಗೇಶ್ ಮತ್ತು ಪ್ರಸಾದ್,ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ,ಕಿರಿಯ ಇಂಜಿನಿಯರ್ಗಳಾದ ಶಿವಣ್ಣ ಮತ್ತು ದೇವೇಂದ್ರ,ಸಾಮಾಜಿಕ ಅರಣ್ಯ ವಿಭಾಗದ ಲಕ್ಷ್ಮೀನಾರಾಯಣ,ರೇಷ್ಮೆ ಇಲಾಖೆಯ ಉದಯ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್‌,ಶಿವರಾಜ್,ರಮಿತಾ,ಸೋಮ ಮೂರ್ತಿ,ನರೇಗಾ ಯೋಜನೆಯ ತಾಂತ್ರಿಕ ಸಹಾಯಕರು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

ರಾಜಕೀಯ

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

"ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

[ccc_my_favorite_select_button post_id="119818"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!