ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ನೀಡಲಾಗುವ ವಿಕಲಚೇತನ ವ್ಯಕ್ತಿಯು ಸಾಮಾನ್ಯ ವ್ಯಕ್ತಿಯೊಡನೆ ಮದುವೆಯಾದಲ್ಲಿ ವಿವಾಹ ಪ್ರೋತ್ಸಾಹಧನ ಯೋಜನೆಯಡಿ ರೂ.50,000/- ಗಳನ್ನು 5 ವರ್ಷಗಳವರೆಗೆ ಹೂಡಿಕೆ ರೂಪದಲ್ಲಿ ನೀಡಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಫಲಾನುಭವಿಗಳು, ವಿಕಲಚೇತನರ ವೈದ್ಯಕೀಯ ಗುರುತಿನ ಚೀಟಿ/ಯು.ಡಿ.ಐ.ಡಿ. ಕಾರ್ಡ್ ಜೆರಾಕ್ಸ್ ಪ್ರತಿ, ವಿಕಲಚೇತನರು ಹಾಗೂ ಸಾಮಾನ್ಯ ವ್ಯಕ್ತಿಗಳು ಕನಿಷ್ಟ 10 ವರ್ಷ ಕರ್ನಾಟಕದಲ್ಲಿ ವಾಸವಾಗಿರುವ ಬಗ್ಗೆ ತಹಸೀಲ್ದಾರ್‌ರವರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ, 2014-15ನೇ ಆರ್ಥಿಕ ವರ್ಷದಿಂದೀಚೆಗೆ ವಿವಾಹ ನೊಂದಣಾಧಿಕಾರಿಗಳ ಕಛೇರಿಯಲ್ಲಿ ನೊಂದಾಯಿಸಿದ ಪ್ರಮಾಣ ಪತ್ರ, (ವಿವಾಹವಾಗುವ ಯುವತಿ ವಯಸ್ಸು 18 ಹಾಗೂ ಯುವಕರ ವಯಸ್ಸು 21 ವರ್ಷ ಮೇಲ್ಪಟ್ಟಿರಬೇಕು.) ಫಲಾನುಭವಿಗಳ ಜಂಟಿ ಖಾತೆಯ ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿ. ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನಕಲು ಪ್ರತಿ. ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ, ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ. ತಾಲ್ಲೂಕು ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಅಥವಾ ವಿಕಲಚೇತನರ ಸಹಾಯವಾಣಿ: 080-29787441 ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ, ನಂ.:03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.