ದೊಡ್ಡಬಳ್ಳಾಪುರ: ನರೇಗಾ ಯೋಜನಲ್ಲಿ ಉತ್ತಮ ಪ್ರಗತಿಗೆ ಶ್ರಮಿಸಿದ ದೊಡ್ಡಬಳ್ಳಾಪುರ ತಾಪಂ ಇಒ ಮುರುಡಯ್ಯ ಹಾಗೂ ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ ಅವರನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿವತಿಯಿಂದ ಸನ್ಮಾನಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ದೇವನಹಲ್ಲಿಯಲ್ಲಿ ನಡೆದ 74ನೇ ಸ್ವಾತಂತ್ರ ದಿನಾಚರಣೆ ಸಂದರ್ಭದಲ್ಲಿ ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಅಶೋಕ್ ತಾಪಂ ಇಒ,ಎಡಿ ಅವರನ್ನು ಸನ್ಮಾನಿಸಿದರು.
ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್,
ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್, ವಿಧಾನ ಪರಿಷತ್ ಸದಸ್ಯರಾದ ಎನ್.ನಾಗರಾಜು(ಎಂಟಿಬಿ), ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣವರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಮ್.ನಾಗರಾಜ ಮತ್ತಿತ್ತರರು ಇದ್ದರು.
ಉಳಿದಂತೆ ನರೇಗಾ ಯೋಜನೆ ಅಡಿಯಲ್ಲಿ ಉತ್ತಮ ಸಾಧನೆ ದೊಡ್ಡಬಳ್ಳಾಪುರ ತಾಲೂಕಿನ ಸಾಮಾಜಿಕ ಅರಣ್ಯ ಇಲಾಖೆಯ ಎಡಿಎ ಲಕ್ಷ್ಮೀನಾರಾಯಣ,ಪಿಆರ್ ಇಡಿ ಇಲಾಖೆಯ ಎಇಇ ಪ್ರಸಾದ್ ಅವರನ್ನು ಸಹ ಸನ್ಮಾನಿಸಲಾಯಿತು.