ದೊಡ್ಡಬಳ್ಳಾಪುರ: ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ಏರ್ಪಡಿಸಲಾದ “74ನೇ ಸ್ವಾತಂತ್ರ್ಯ ದಿನಾಚರಣೆ” ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ಅವರು ಧ್ವಜಾರೋಹಣ ನೆರವೇರಿಸಿ, “ರಾಷ್ಟ್ರಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ಈ ವೇಳೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ ಲಕ್ಷೀನಾರಾಯಣ, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್, ವಿಧಾನ ಪರಿಷತ್ ಸದಸ್ಯ ಎನ್.ನಾಗರಾಜು(ಎಂಟಿಬಿ), ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣವರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಮ್.ನಾಗರಾಜ ಮತ್ತಿತ್ತರರು ಇದ್ದರು.