ದೊಡ್ಡಬಳ್ಳಾಪುರ: ದೇವನಹಳ್ಳಿ ತಾಲ್ಲೂಕು, ಕಸಬಾ ಹೋಬಳಿಯ, ಚಿಕ್ಕಸಣ್ಣೆ ಗ್ರಾಮದಲ್ಲಿ ಇಂದು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಮೊಬೈಲ್ ಆ್ಯಪ್ ಮುಖಾಂತರ ರೈತರ ಸ್ವಯಂ ಬೆಳೆ ಸಮೀಕ್ಷೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎನ್.ನಾಗರಾಜ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ ಲಕ್ಷೀನಾರಾಯಣ, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಕೃಷಿ ಇಲಾಖೆ ಉಪ ನಿರ್ದೇಶಕಿ ವಿನುತಾ ಸೇರಿದಂತೆ ಮತ್ತಿತರರು ಇದ್ದರು.