ಕರೊನಾ ಸೋಂಕಿನಿಂದ ದೊಡ್ಡಬಳ್ಳಾಪುರವನ್ನು ರಕ್ಷಸಿಕೊಳ್ಳಬೇಕಾದ ಹೊಣೆ ನಮ್ಮದು: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕರೊನಾದಿಂದ ನಮ್ಮ ದೇಶ ಹಾಗೂ ತಾಲೂಕನ್ನು ರಕ್ಷಸಿಕೊಳ್ಳಬೇಕಾದ ಹೊಣೆ ಪ್ರತಿಯೊಬ್ವರು ಹೊರಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು,ಕರೊನಾ ಸೋಂಕಿನ ನಿರ್ವಹಣೆ ತಾಲೂಕು ಆಡಳಿತಕ್ಕೆ ಕಷ್ಟವಾಗಲಿಲ್ಲ,ಹಿಂದಿನ ಸರ್ಕಾರದ ಅವದಿಯಲ್ಲಿ ಸುಸಜ್ಜಿತ ತಾಯಿ ಮಗು ಆಸ್ಪತ್ರೆ ನಿರ್ಮಾಣ, ವಸತಿ ಶಾಲೆಗಳ ನಿರ್ಮಾಣದಿಂದ ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಯಿತಾದರು ಅಧಿಕಾರಿ ಶ್ರಮ ಅಪಾರ ಎಂದರು.

ಕಳೆದ 74 ವರ್ಷಗಳಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳಷ್ಟು ಸಡಗರ, ಸಂಭ್ರಮದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕುರಿತು ನಮ್ಮ ಮಕ್ಕಳಿಗೆ ತಿಳಿಸುತ್ತಾ ಬಂದಿದ್ದೇವೆ.ಆದರೆ,ಕರೊನಾ ಸೋಂಕಿನ ಕಾರಣ ಈ ವರ್ಷ ಆ ಎಲ್ಲಾ ಕಾರ್ಯಗಳು ವಿರಳವಾಗಿದೆ.ಸ್ವಾತಂತ್ರ್ಯ ನಂತರ ದೇಶ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಮಹಾಮಾರಿ ಕರೊನಾ ಸೋಂಕು ಸಹ ಒಂದಾಗಿದ್ದು.ನಮ್ಮ ದೇಶವನ್ನು ಕರೊನಾದಿಂದ ರಕ್ಷಿಸಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದ ಅವರು.ಎಸ್ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ನೆನೆದರು.

ದ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ  ಉಪವಿಭಾಗಾಧಿಕಾರಿ ಅರುಳ್ ಕುಮಾರ್,ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ವಾತಂತ್ರ್ಯ ದಿನಾಚರಣೆ ಸಂಧರ್ಭದಲ್ಲಿ ನೆನೆಯಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನದ ಅಡಿಯಲ್ಲಿ ಸರ್ವರಿಗೂ ಸಮಪಾಲು,ಸರ್ವರಿಗೂ ಸಮಬಾಳು ಎಂಬಂತೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಬೇಕಿದೆ ಎಂದರು.ನೇರೆ ರಾಷ್ಟ್ರಗಳ ಕಿತಾಪತಿಯನ್ನು ನಮ್ಮ ವೀರ ಯೋಧರು ದಿಟ್ಟವಾಗಿ ಎದುರುಸುತ್ತಿದ್ದು ಅವರ ತ್ಯಾಗ ಬಲಿದಾನ ಅಪಾರವಾಗಿದ್ದು ಅವರನ್ನು ನೆನೆಯಬೇಕಿದೆ.

ಈಡೀ ಪ್ರಪಂಚ ಕರೊನಾ ಸೋಂಕಿನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು ಅದನ್ನು ಭಾರತೀಯರು ಬಹಳಷ್ಟು ಮುಂಜಾಗ್ರತೆವಹಿಸಿ ದಿಟ್ಟ ಉತ್ತರ ನೀಡುತ್ತಿದ್ದು,ಮುಂದಿನ ದಿನಗಳಲ್ಲಿ ಕರೊನಾದಿಂದ ಜೀವ ರಕ್ಷಣೆ ಮಾಡಿಕೊಂಡು ದೇಶದ ಆರ್ಥಿಕ ಅಭಿವೃದ್ಧಿಗೆ ನಮ್ಮ ಪಾತ್ರ ಅಪಾರವಾಗಿದೆ.

ಕೃಷಿ ತಂತ್ರಜ್ಞಾನ,ಕೈಗಾರಿಕೆಯಲ್ಲಿ ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಕರೊನಾದಿಂದ ಉಂಟಾಗಿರುವ ಉದ್ಯೋಗ ಕಡಿತಕ್ಕೆ ಪರ್ಯಾಯವಾಗಿ ಕೌಶಲ್ಯ ಅಭಿವೃದ್ಧಿ ಯೋಜನೆಯನ್ನು ಬಳಸಿಕೊಳ್ಳಬೇಕಿದೆ ಆಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿರುವ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ ಅಭಿವೃದ್ಧಿ ಪಡೆಯಬೇಕಿದೆ ಎಂದರು.

ಕ್ಷೇತ್ರಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಮಾತನಾಡಿ, ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸರಳವಾಗಿ ಆಚರಿಸಲಾಗಿದೆ ಎಂದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮ ಹೆಚ್.ಪಿ.ಜಯರಾಂ, ಉಪಾಧ್ಯಕ್ಷೆ ಪದ್ಮಾವತಿ ಅಣ್ಣಯ್ಯಪ್ಪ, ಸರ್ಕಲ್ ಇನ್ಸ್ಪೆಕ್ಟರ್ ರಾಘವ ಎಸ್.ಗೌಡ,ತಾಪ ಇಒ ಮುರುಡಯ್ಯ, 

ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್,ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್ ರೆಡ್ಡಿ,ಉಪಾಧ್ಯಕ್ಷ ಮಂಜುನಾಥ್ ಮತ್ತಿತರಿದ್ದರು.

ಇದೇ ವೇಳೆ ಕರೊನಾ ನಿಯಂತ್ರಣಕ್ಕಾಗಿ ಶ್ರಮಿಸಿದ ಕರೊನಾ ವಾರಿಯರ್ಸ್‌ಗಳನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಸನ್ಮಾನಿಸಲಾಯಿತು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!