ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳ ಮಕ್ಕಳು ಸಹ ಗುಣಮಟ್ಟದ ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವ ದೃಷ್ಟಿಯಿಂದ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಸಹಕಾರದೊಂದಿಗೆ ಅಡೋಬ್ ಬನಾವೋ ಬಸ್ ಸೇವಾಕಾರ್ಯ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣದ ಮೂಲಕ ವಿಜ್ಞಾನ ಗಣಿತ ಬೋಧನೆ ಮಾಡಲಾಗುತ್ತಿದೆ ಎಂದು ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ವಲಯ ಅಧಿಕಾರಿ ವಿ.ಎಂ.ನವೀನ್ ಕುಮಾರ್ ತಿಳಿಸಿದ್ದಾರೆ.
ಆನ್‌ಲೈನ್ ಶಿಕ್ಷಣದ ಕುರಿತು ಮಾಹಿತಿ ನೀಡಿದ ಅವರು,ಎಲ್ಲಾ ವಿದ್ಯಾರ್ಥಿಗಳಿಗೂ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ನಮ್ಮ ಸಂಸ್ಥೆಯಿಂದ ಈ ಕಾರ್ಯಕ್ರಮ ಆರಂಭಿಸಲಾಗಿದೆ.ಮಕ್ಕಳಲ್ಲಿರುವ ವಿನೂತನ ಆಲೋಚನೆಗಳನ್ನು ತಿಳಿಸಲು ಕೂಡ ಅವರಿಗೆ ಅವಕಾಶ ಮಾಡಿಕೊಡಲಾಗಿದೆ. ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ರಾಜ್ಯದ 53 ಕೇಂದ್ರಗಳ ಮೂಲಕ ಗ್ರಾಮೀಣ ಭಾಗದ ಸರಕಾರಿ ಶಾಲೆಯ 60 ಸಾವಿರಕ್ಕೂ ಹೆಚ್ಚು ಬಡಮಕ್ಕಳ ಉಚಿತ ಆನ್‌ಲೈನ್ ಶಿಕ್ಷಣ ನೀಡುವ ಮೂಲಕ ವಿಜ್ಞಾನ ಹಾಗೂ ಗಣಿತ ಬೋಧನೆಯಲ್ಲಿ ನಿರತವಾಗಿದೆ.ಸರಕಾರಿ ಶಾಲಾ ಮಕ್ಕಳು ಕಾಲಹರಣ ಮಾಡುತ್ತಿದ್ದ ಶಿಕ್ಷಣದಿಂದ ವಂಚಿತರಾಗುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ ಹಲವಾರು ಪ್ರಯತ್ನಗಳು ನಡೆಯುತ್ತಿವೆ ಎಂದರು.
ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ತಾಲೂಕು ಅಕಾರಿ ನಾರಾಯಣ ಸ್ವಾಮಿ ಮಾಹಿತಿ ನೀಡಿ,ಬಡ ವಿದ್ಯಾರ್ಥಿಗಳಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಈ ಪ್ರಯತ್ನಕ್ಕೆ ಕೈ ಹಾಕಲಾಗಿದೆ,ಸರಕಾರಿ ಶಾಲೆಗಳ ಶಿಕ್ಷಕರ ಸಹಾಯದಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಶಿಕ್ಷಣ ನೀಡುವ ಪ್ರಯತ್ನ ಇದಾಗಿದೆ.ಮಕ್ಕಳಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಏಪ್ರಿಲ್ ತಿಂಗಳಿಂದ ಗ್ರಾಮೀಣ ಮಕ್ಕಳಿಗೆ ಆನ್‌ಲೈನ್ ಮೂಲಕ ವಿಜ್ಞಾನ ರಸಪ್ರಶ್ನೆ ಮಾಡಿ ಅವರ ವಿeನ ಆಸಕ್ತಿ ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ. ಮಕ್ಕಳಲ್ಲಿ ವಿಶೇಷ ಆಲೋಚನೆಗಳಿದ್ದರೆ ಅವುಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಆನಲೈನ್‌ನಲ್ಲಿ ವಿಜ್ಞಾನ ಮೇಳ ಹಾಗೂ ಶಿಕ್ಷಕರ ತರಬೇತಿ ಕಾರ್ಯಾಗಾರಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.