ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 16 ರಂದು) 51 ಪುರುಷರು ಹಾಗೂ 36 ಮಹಿಳೆಯರು ಸೇರಿದಂತೆ 87 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 4 ಪುರುಷರು ಮತ್ತು 6 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 13 ಪುರುಷರು ಮತ್ತು 8 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 4 ಪುರುಷರು ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 15 ಪುರುಷರು ಮತ್ತು 5 ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತದ ವರದಿಗೂ,ಜಿಲ್ಲಾಡಳಿತದ ವರದಿಗೂ ವೆತ್ಯಾಸ ಮುಂದುವರೆದ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.