ಬೆಂಗಳೂರು: ಆಗಸ್ಟ್ 20 ರಂದು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಜನ್ಮದಿನದ ಅಂಗವಾಗಿ ತಮಿಳುನಾಡಿನ ಪೆರಂಬೂರಿನಿಂದ ಆರಂಭವಾಗಿರುವ 29 ನೇ ರಾಜೀವ್ ಗಾಂಧಿ ಸದ್ಭಾವನಾ ಜ್ಯೋತಿ ಯಾತ್ರೆ’ಯನ್ನು ಸ್ವಾಗತಿಸಿ ಜ್ಯೋತಿ ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಬೀಳ್ಕೊಟ್ಟರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಕೇಂದ್ರ ಸಚಿವ ಕೆ.ಹೆಚ್ ಮುನಿಯಪ್ಪ, ಕಾರ್ಮಿಕ ಘಟಕದ ಮುಖ್ಯಸ್ಥ ಎಸ್.ಎಸ್ ಪ್ರಕಾಶಂ, ಕೆಪಿಎಂಸಿ ಅಧ್ಯಕ್ಷೆ ಪುಷ್ಪ ಅಮರನಾಥ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಜಿ. ಕೃಷ್ಣಪ್ಪ ಮತ್ತಿತರಿದ್ದರು.
ಈ ಜ್ಯೋತಿ ರಾಜೀವ್ ಗಾಂಧಿ ಅವರ ಜನ್ಮದಿನದಂದು ನವದೆಹಲಿ ತಲುಪಲಿದೆ.