ಮೈಸೂರು: ಆಗಸ್ಟ್ 19ರಂದು ಅಮಾವಾಸ್ಯೆ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂದು ಭಕ್ತರಿಗೆ ಸಾರ್ವಜನಿಕ ದರ್ಶನವನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಆದೇಶಿಸಿರುತ್ತಾರೆ.
ನಿಷೇಧವಿರುವ ದಿನದಂದು ಸಾರ್ವಜನಿಕ ವಾಹನ ಮತ್ತು ಖಾಸಗಿ ವಾಹನಗಳು ಬೆಟ್ಟಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ದೇವಾಲಯದ ಪ್ರದೇಶದಲ್ಲಿ ದೇಗುಲದ ವತಿಯಿಂದ ಹಾಗೂ ದಾನಿಗಳಿಂದ ಸಾಮೂಹಿಕವಾಗಿ ಪ್ರಸಾದ ತಯಾರಿಸುವುದು ಹಾಗೂ ವಿತರಿಸುವುದನ್ನು ಮುಂದಿನ ಆದೇಶದವರೆಗೆ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.