ಡಿ.ಜೆ.ಹಳ್ಳಿ, ಕಾವಲಭೈರಸಂದ್ರ ಗಲಭೆ: ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆ ಕೋರರಿಂದ ವಸೂಲಿ

ಬೆಂಗಳೂರು:  ಡಿ.ಜೆ.ಹಳ್ಳಿ, ಕಾವಲಭೈರಸಂದ್ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಇಂದು ಸಭೆ ನಡೆಸಿದರು.

ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚ ನಡೆದಿದದ್ದು,ಸಭೆಯ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ,

ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಸಂಭವಿಸಿದ ಗಲಭೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆ ಕೋರರಿಂದ ವಸೂಲು ಮಾಡುವ ಬಗ್ಗೆ ರಾಜ್ಯ ಉಚ್ಛ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, ಈಗಾಗಲೇ ನೀಡಲಾಗಿರುವ ದೇಶದ ಉಚ್ಛ ನ್ಯಾಯಾಲಯದ ಆದೇಶದಂತೆ ಕ್ಲೇಮ್ ಕಮಿಷನರ್ ನೇಮಿಸಲು ಕೋರುವ ಬಗ್ಗೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಈ ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ವಿವರಿಸಿದರು. ಅಲ್ಲದೇ ಈ ಪ್ರಕರಣಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯಿದೆ(UAPA)ಯನ್ನು ಸಹ ಅಳವಡಿಸಿರುವುದರ ಬಗ್ಗೆ ತಿಳಿಸಲಾಯಿತು.

ಈ ತನಿಖೆಗಳನ್ನು ತ್ವರಿತವಾಗಿ ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸಿದ್ದು,ಈಗಾಗಲೇ ದಾಖಲಾಗಿರುವ  ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗಿದೆ.ಈ ಅಪರಾಧ ಪ್ರಕರಣಗಳಲ್ಲಿ ಬಂಧಿತ ಅಪರಾಧಿಗಳಿಗೆ ಸಂಬಂಧಪಟ್ಟಂತೆ ಅವಶ್ಯ ಕಂಡವರನ್ನು  ಗುಂಡಾ ಕಾಯಿದೆಯಡಿಯಲ್ಲಿ ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಮುಖ್ಯಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿ-ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು.

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]