ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಸೋಮವಾರದ ಸಂಜೆಯ ವೇಳೆಗೆ 12ಮಂದಿಗೆ ಕರೊನಾ ಸೋಂಕು ದೃಢಪಟ್ಟಿದ್ದು,19 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದರೆ,ಒಬ್ಬರು ಸಾವನಪ್ಪಿದ್ದಾರೆ.
ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ,ಸೋಮವಾರ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 7 ಪುರುಷರು ಹಾಗೂ 5 ಮಂದಿ ಮಹಿಳೆಯರು ಸೇರಿ ಹನ್ನೆರಡು ಜನರಿಗೆ ಸೋಂಕು ದೃಡಪಟ್ಟಿದೆ.
ಹರಿತಲೇಖನಿಗೆ ದೊರಕಿರುವ ವರದಿಯಂತೆ.ಖಾಸ್ ಬಾಗ್ ಸಮೀಪದ 60ವರ್ಷದ ಮಹಿಳೆ ಹೃದಯಾಘಾತದಿಂದ ಸಾವನಪ್ಪಿದ್ದು,ಮರಣೋತ್ತರ ಪರೀಕ್ಷೆಯಲ್ಲಿ ಕರೊನಾ ಸೋಂಕು ದೃಢಪಟ್ಟಿದೆ.ಉಳಿದಂತೆ ಮಜರಾಹೊಸಹಳ್ಳಿ 2, ದರ್ಜಿಪೇಟೆ, ಕರೇನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ತ್ಯಾಗರಾಜ ನಗರ, ಕಾಲೇಜು ರಸ್ತೆ, ಕರಗ ದೇವಸ್ಥಾನದ ಸಮೀಪ, ಗಾಣಿಗರಪೇಟೆ, ಧರ್ಮರಾಯ ಸ್ವಾಮಿ ದೇವಾಲಯದ ಸಮೀಪ ಹಾಗೂ ವನ್ನಿಗರಪೇಟೆಯ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 816 ಮಂದಿಗೆ ಸೋಂಕು ತಗುಲಿದ್ದು, 492 ಮಂದಿ ಗುಣಮುಖರಾಗಿದ್ದರೆ 20 ಮಂದಿ ಸಾವನಪ್ಪಿದ್ದಾರೆ.
ಸೋಂಕಿಗೆ ಒಳಗಾದ 30ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 272 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.