ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 17 ರಂದು) 16 ಪುರುಷರು ಹಾಗೂ 9 ಮಹಿಳೆಯರು ಸೇರಿದಂತೆ 25 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.
ವರದಿಯ ಅನ್ವಯ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 2 ಪುರುಷರು ಮತ್ತು 5 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 4 ಪುರುಷರು ಮತ್ತು 3 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 4 ಪುರುಷರು ಮತ್ತು 1 ಮಹಿಳೆ ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 6 ಪುರುಷರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದಿದೆ.