ದೊಡ್ಡಬಳ್ಳಾಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಹಾಗೂ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳೊಂದಿಗೆ ಉಚಿತ ಸಿ.ಇ.ಟಿ. ಮತ್ತು ನೀಟ್ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವುದರ ಜೊತೆಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.
2020-21ನೇ ಸಾಲಿನಲ್ಲಿ ಪ್ರತಿ ವಸತಿ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ತರಗತಿಯ ಪಿ.ಸಿ.ಎಂ.ಬಿ.(PCMB) ಮತ್ತು ಪಿ.ಸಿ.ಎಂ.ಸಿ.(PCMC) ಸಂಯೋಜನೆಗಳಿಗೆ ತಲಾ 40 ರಂತೆ ಒಟ್ಟು 80 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗುವುದು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಪ್ರವರ್ಗ-1 ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ ರೂ. 2,50,000/- ಹಿಂದುಳಿದ ವರ್ಗದ ಪ್ರವರ್ಗ 2ಎ, 2ಬಿ, 3ಎ, 3ಬಿ, ಗುಂಪಿಗೆ ಸೇರಿದ ವಿದ್ಯಾರ್ಥಿಗಳಿಗೆ ಆದಾಯದ ಮಿತಿ ರೂ. 1,00,000/- ಇರುತ್ತದೆ.
ಪ್ರವೇಶಕ್ಕಾಗಿ ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ: 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ಮತ್ತು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಸತಿ ಶಾಲೆ ಹಾಗೂ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಬಚ್ಚಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ, ಸಲ್ಲಿಸಲು ಕೊನೆಯ ಆಗಸ್ಟ್ 22 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ: 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ದೂ.ಸಂ.: 080 29559987/ 9110256424/ 8971259724/ 7204463886/ 7259613001/ 9742893271 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.