ದೊಡ್ಡಬಳ್ಳಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ಪಡೆಯಲು 2019ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕ್ರೀಡಾಪಟುಗಳು ಅರ್ಜಿಗಳನ್ನು ಕಚೇರಿಯಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಶಿಫಾರಸ್ಸಿನೊಂದಿಗೆ ವೆಬ್‍ಸೈಟ್ http://karunadu.karnataka.gov.in.dyes ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2020ರ ಸೆಪ್ಟೆಂಬರ್ 10 ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂ.ಸಂ.: 9845608598/ 080 29787443 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.