ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು:ಬಿ.ಸಿ.ಪಾಟೀಲ್

ಉತ್ತರಕನ್ನಡ: ಕೃಷಿ ವಿಶ್ವವಿದ್ಯಾಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು.ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಇಂದು ಕೃಷಿ ವಿಶ್ವವಿದ್ಯಾಲಯ ಧಾರವಾಡ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನವ ದೆಹಲಿ,ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಉತ್ತರ ಕನ್ನಡ(ಶಿರಸಿ)ಯ ನೂತನ ಆಡಳಿತ ಭವನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಅಧಿಕಾರಿಯನ್ನು ವಿಶ್ವವಿದ್ಯಾಲಯದ ವ್ಯಾಪ್ಯಿಗೊಳಪಡುವ ಪ್ರತಿಜಿಲ್ಲೆಗೊಬ್ಬ ನೋಡೆಲ್ ಆಫಿಸರ್ ಹಾಗೂ ಪ್ರತಿಯೊಂದು ರೈತ ಸಂಪರ್ಕ‌ಕೇಂದ್ರಕ್ಕೆ ಅಸಿಸ್ಟೆಂಟ್ ಪ್ರೊಫೆಸರ್ ಗಳನ್ನು ನೇಮಕ ಮಾಡಬೇಕು. ಕೃಷಿ ವಿಜ್ಞಾನ ಕೇಂದ್ರಗಳು, ವಿಶ್ವವಿದ್ಯಾಲಯಗಳು, ರೈತಸಂಪರ್ಕ‌ಕೇಂದ್ರಗಳು ರೈತನಿಗೋಸ್ಕರ ಇರುವುದು ಎಂಬುದನ್ನು ಮನದಟ್ಟು ಮಾಡಬೇಕು ಎಂದು ಸಚಿವರು ಹೇಳಿದರು.

ಭುಸುಧಾರಣೆ ಕಾಯಿದೆ ತಿದ್ದುಪಡಿ ಹಾಗೂ ಕೊರೊನಾ ಕಾರಣಕ್ಕಾಗಿ ಪಟ್ಟಣದಿಂದ ಹಳ್ಳಿಗಳಗೆ ವಲಸೆ ಹೋಗಿರುವ ಯುವಕರಿಗೆ ಕೃಷಿಯಿಂದಾಗಿ ಉದ್ಯೋಗ ಸಿಗುವಂತಾಗಿದೆ ಎಂದರು.

ಈ ಬಾರಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು ರೈತರ ಆದಾಯ ದುಪ್ಪಟ್ಟಗೊಳಿಸುವ ಬೆಳೆಗೆ ಉತ್ತಮ ಬೆಲೆ ನೀಡುವಂತೆ ಮಾಡಲು ಸರ್ಕಾರ ಮತ್ತು ಇಲಾಖೆ ಹಲವಾರು ಮಹತ್ವದ  ಯೋಜನೆಗಳನ್ನು ಕೈಗೊಳ್ಳುತ್ತಿದೆ.ಇದರ ಪ್ರಮುಖ ಭಾಗವಾಗಿ ಆಸ್ಟ್ರೇಲಿಯಾದಲ್ಲಿ ಬೆಳೆ ಸಮೀಕ್ಷೆಗೆ ಇದ್ದಂತಹ ಆ್ಯಪ್ ಸೌಲಭ್ಯವನ್ನು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ರೈತ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಸ್ವಾಭಿಮಾನಿ ರೈತ ತನ್ನ ಬೆಳೆಗೆ ತಾನೇ ಮೌಲ್ಯಮಾಪನ ಮಾಡಿ ಪ್ರಮಾಣಪತ್ರ ನೀಡುವ ಹಾಗೂ ಸರ್ಕಾರದಿದ ಸೌಲಭ್ಯವನ್ನು ಪಡೆಯುವಂತಹ ಕ್ರಾಂತಿಕಾರಕ ಹೆಜ್ಜೆ ಇದಾಗಿದೆ ಎಂದರು.

ಕರೊನಾ ‌ಲಾಕ್ಡೌನ್‌ ಬಳಿಕವೂ ಹಾಗೂ ಲಾಕ್ಡೌನ್ ಸಂದರ್ಭದಲ್ಲಿಯೂ ಉಳಿದಂತಹ ಒಂದೇ ಒಂದು ಉದ್ಯಮವೆಂದರೆ ಅದು ಕೃಷಿ‌ಮಾತ್ರ. ಲಾಕ್ಡೌನ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗಬಾರದು ಹಾಗೂ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಬಾರದು ಎಂದು ಲಾಕ್ಡೌನ್‌ನಿಂದ ಕೃಷಿ ಚಟುವಟಿಕೆಗಳಿಗೆ ‌ನಿರ್ಬಂಧ ತೆರವುಗೊಳಿಸಲಾಯಿತು. ಲಾಕ್ಡೌನ್ ಸಂದರ್ಭದಲ್ಲಿ ಕೃಷಿಗೆ ಬಾಧೆಯಾದಲ್ಲಿ ಮುಂದಿನ ದಿನಗಳಲ್ಲಿ ಉಣ್ಣಲು ಅನ್ನ ಸಿಗದು ಎಂಬುದನ್ನು ಮನಗಂಡು ಈ ತೆರವು ನಿರ್ಬಂಧಿಸಿ ಕೃಷಿ ಇಲಖೆ‌ ಮತ್ತು ಸರ್ಕಾರ ರೈತರೊಂದಿಗೆ ಏಪ್ರಿಲ್ 10 ರಂದು ಮುವತ್ತು ಜಿಲ್ಲೆಗಳಲ್ಲಿ ಮುವತ್ತು ದಿನಗಳ ರಾಜ್ಯಾದ್ಯಂತ ಪ್ರವಾಸ ಆರಂಭಿಸಿ ಕೃಷಿ ಚಟುವಟಿಕೆ ಮತ್ತು ರೈತರ ಸಮಸ್ಯೆಗಳನ್ನು ಆಲಿಸಿ ರೈತರಿಗೆ ಆತ್ಮಸ್ಥೈರ್ಯ ತುಂಬಲಾಯಿತು ಎಂದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಸಚಿವ ಶಿವರಾಮ ಹೆಬ್ಬಾರ್, ಮೇಲ್ಮನೆ ಸದಸ್ಯ ಶಾಂತರಾಮ್ ಸಿದ್ದಿ,ಧಾರವಾಡ  ಕೃಷಿ ವಿವಿಯ ಕುಲಪತಿ ಡಾ.ಮಹಾದೇವ ಚೆಟ್ಟಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!