ದೊಡ್ಡಬಳ್ಳಾಪುರ: ಕೋವಿಡ್ ನಿರ್ವಹಣೆಗೆ ಜನರಿಗೆ ನೆರವಾಗಲು ಕೆಪಿಸಿಸಿ ಆರಂಭಿಸಿರುವ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.
ನಗರದ ಸಪ್ತಗಿರಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು,ಕೆಪಿಸಿಸಿ ವೈದ್ಯರ ಘಟಕ ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ಹೊಸ ಅಧ್ಯಾಯ ಬರೆದಿದ್ದು,ಈ ಕಾರ್ಯಕ್ರಮ ಜನರಿಗೆ ತಲುಪಬೇಕಿದ್ದು,ಕಾಂಗ್ರೆಸ್ ಪಕ್ಷ ಕೇವಲ ಅಧಿಕಾರಕ್ಕಾಗಿ ಮಾತ್ರವಲ್ಲ ಅಧಿಕಾರದಲ್ಲಿಲ್ಲದಿದ್ದರು ಕಷ್ಟದಲ್ಲಿರುವ ಜನರ ಸೇವೆ ಮಾಡುತ್ತದೆ ಎಂದರು.
ಈ ವೇಳೆ ಜಿಲ್ಲಾಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಕೆಪಿಸಿಸಿ ಉಸ್ತುವಾರಿ ಸಪ್ತಗಿರಿ,ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು ಹಾಜರಿದ್ದರು.
ಈ ವೇಳೆ ಕೆಪಿಸಿಸಿ ವೈದ್ಯಕೀಯ ಘಟಕದ ವೈದ್ಯರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ವಾರ್ಡ್ಗಳಲ್ಲಿ ಕರೊನಾ ಸೊಂಕು ತಪಾಸಣೆ,ನಿಯಂತ್ರಣ ಹಾಗೂ ಸೋಂಕಿತರಿಗೆ ನೆರವು ನೀಡುವ ಕುರಿತು ಹಲವು ಮಾಹಿತಿ ನೀಡಿದರು.