ದೌರ್ಜನ್ಯಕ್ಕೊಳಗಾದವರಿಗೆ ತ್ವರಿತ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ದೌರ್ಜನ್ಯಕ್ಕೊಳಗಾದವರಿಗೆ ತ್ವರಿತ ಪರಿಹಾರದ ಜೊತೆಗೆ ಗೌರವಯುತವಾಗಿ ಜೀವನ ನಡೆಸಲು ಅಧಿಕಾರಿಗಳು  ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2020 ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಪರಿಶಿಷ್ಟ ಜನಾಂಗದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಡ್ಡಾಯವಾಗಿ ಶಿಕ್ಷೆಯಾಗಬೇಕು. ಇದಕ್ಕೆ ಪೂರಕವಾದ ಕ್ರಮವನ್ನು  ಅಧಿಕಾರಿಗಳು ವಿಳಂಬ ಮಾಡದೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಸರಕಾರಿ ಜಮೀನು ಲಭ್ಯವಿಲ್ಲದ ಗ್ರಾಮಗಳಲ್ಲಿ ಖಾಸಗಿ ಜಮೀನುಗಳನ್ನು ಖರೀದಿಸಿ ಸ್ಮಶಾನಕ್ಕೆ ಕಾಯ್ದಿರಿಸಲಾಗಿದೆ. ಒತ್ತುವರಿ ಮಾಡಿಕೊಳ್ಳಲಾಗಿರುವ ಸ್ಮಶಾನ ಜಾಗವನ್ನು ತೆರವುಗೊಳಿಸಬೇಕು. ಸ್ಮಶಾನ ಭೂಮಿ ಲಭ್ಯವಿಲ್ಲದ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳ ಪೈಕಿ ಈಗಾಗಲೇ ಹಲವು ಕಡೆ ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನ ಭೂಮಿ ಕಲ್ಪಿಸಿಕೊಡಲಾಗಿದೆ ಎಂದು ಹೇಳಿದರು.

ಸಾರ್ವಜನಿಕರೊಡನೆ ಗೌರವ ಯುತವಾಗಿ ನಡೆದುಕೊಳ್ಳುವುದು ಸರ್ಕಾರಿ ಅಧಿಕಾರಿಗಳ ಕರ್ತವ್ಯವಾಗಿದೆ. ಸ್ಥಳೀಯ ಮಟ್ಟದಲ್ಲೇ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿಬೇಕು ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲೆಯಲ್ಲಿ ನಡೆದಿರುವ 32 ದೌರ್ಜನ್ಯ ಪ್ರಕರಣಗಳ ಪೈಕಿ, 28 ಪ್ರಕರಣಗಳಿಗೆ ರೂ. 31,93,626 ಪರಿಹಾರ ಧನವನ್ನು ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಹನುಮಂತರಾಯಪ್ಪ ಅವರು  ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]