ಬಿಜೆಪಿ ಸರ್ಕಾರದಿಂದ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಗಲಭೆ ಕುರಿತು ಕಾಂಗ್ರೆಸ್ ಪಕ್ಷದ ಹಾಲಿ‌ ಮತ್ತು ಮಾಜಿ ಕಾರ್ಪೊರೇಟರ್ಗಳನ್ನು ತನಿಖೆಗೆ ಒಳಪಡಿಸಿರುವ ಬೆನ್ನಲ್ಲೆ, ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು. ದಿನಕ್ಕೊಬ್ಬ ಸಚಿವರು, ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್‌ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ

ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ. .ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಯಡಿಯೂರಪ್ಪ ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ  ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ

ರಾಜಕೀಯ ಪಕ್ಷಗಳೇ ಪ್ರಕರಣದ

ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ. ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ  ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ

ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ?

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಂ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!