ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು 72 ಪುರುಷರು ಹಾಗೂ 51 ಮಹಿಳೆಯರು ಸೇರಿದಂತೆ 123 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಇಬ್ಬರು ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಒಬ್ಬರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.ನೆಲಮಂಗಲ ತಾಲ್ಲೂಕಿನಲ್ಲಿ 17 ಪುರುಷರು ಮತ್ತು 5 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 18 ಪುರುಷರು ಮತ್ತು 15 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 10 ಪುರುಷರು ಮತ್ತು 2 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 13 ಪುರುಷರು ಮತ್ತು 11 ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ನೆಲಮಂಗಲ ತಾಲ್ಲೂಕಿನಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 67 ವರ್ಷದ ಮಹಿಳೆ ಮತ್ತು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ 84 ವರ್ಷದ ವೃದ್ದ ಹಾಗೂ ಹೊಸಕೋಟೆ ನಗರದ ನಿವಾಸಿ, 52 ವರ್ಷದ ಪುರುಷರೊಬ್ಬರು ಸಕ್ಕರೆ ಕಾಯಿಲೆ ಯಿಂದ ಬಳಲುತ್ತಿದ್ದು, ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿ ಗೊಂದಲ ಮುಂದುವರೆದಿರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.