ಪ್ರತಿಭಾವಂತರಿಗೆ ಸಮಾಜದಲ್ಲಿ ಎಂದಿಗೂ ಮನ್ನಣೆ

ದೊಡ್ಡಬಳ್ಳಾಪುರ: ಪ್ರತಿಭಾವಂತರಿಗೆ ಸಮಾಜದಲ್ಲಿ ಎಂದಿಗೂ ಮನ್ನಣೆ ಇರುತ್ತದೆ.  ಸಾಧನೆ ಮಾಡಲು ಎಲ್ಲರಿಗೂ ಅವಕಾಶವಿರುತ್ತದೆ.ಶ್ರದ್ದೆ, ಪರಿಶ್ರಮ ಮತ್ತು ನಿರಂತರ ಅಧ್ಯಯನದಿಂದ ವಿದ್ಯಾರ್ಥಿಗಳು ಉತ್ತಮ ಸಾಧಕರಾಗಲು ಸಾಧ್ಯವಾಗುತ್ತದೆ ಎಂದು ಶ್ರೀ ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಅಶ್ವತ್ಥಯ್ಯ ತಿಳಿಸಿದರು. 

ಅವರು ನಗರದ ಕೊಂಗಾಡಿಯಪ್ಪ ಪ್ರೌಢಶಾಲೆಯಲ್ಲಿ ನಡೆದ  ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.   ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ವಿದ್ಯಾಭ್ಯಾಸ ದೊರೆಯಬೇಕೆಂಬುದು  ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಉದ್ದೇಶವಾಗಿದೆ. ಕೊಂಗಾಡಿಯಪ್ಪ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ನಮ್ಮ ವಿದ್ಯಾಸಂಸ್ಥೆಯಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.ಎಲ್ಲರಿಗೂ ವಿದ್ಯಾಭ್ಯಾಸ ನೀಡಬೇಕೆಂಬ ಕೊಂಗಾಡಿಯಪ್ಪ ಅವರ ಕನಸನ್ನು ನಮ್ಮ ವಿದ್ಯಾಸಂಸ್ಥೆಯೂ ನನಸು ಮಾಡುತ್ತಿದೆ ಎಂದರು. 

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾಸಂಸ್ಥೆಯ  ವತಿಯಿಂದ ಗುಣಮಟ್ಟದ ಶಿಕ್ಷಣವನ್ನು ನೀಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉತ್ತಮ ಶಿಕ್ಷಣ ಶಿಕ್ಷಣದಿಂದ ಉತ್ತಮ ದೇಶವನ್ನು ನಿರ್ಮಾಣ ಮಾಡಲು  ಸಾಧ್ಯವಾಗುತ್ತದೆ.         ವಿದ್ಯಾರ್ಥಿಗಳೇ ಶಿಕ್ಷಣದ ಪ್ರಮುಖ ಶಕ್ತಿಯಾಗಿದ್ದಾರೆ.   ಸ್ಪರ್ಧಾ ಜಗತ್ತಿಗೆ ಅನುಗುಣವಾಗಿ ಶೈಕ್ಷಣಿಕ ಮಹತ್ವವನ್ನು ಅರಿತು  ವಿದ್ಯಾರ್ಥಿಗಳಿಗೆ ಕಲಿಸಬೇಕಾಗಿದೆ ಎಂದರು. 

ಕಾರ್ಯಕ್ರಮದಲ್ಲಿ  ಶ್ರೀಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಸಹ ಕಾರ್ಯದರ್ಶಿ ಎ.ಆರ್.ರಾಜಶೇಖರ್, ಖಜಾಂಚಿ ಎ.ರಾಮಶೆಟ್ಟಿ, ನಿರ್ದೇಶಕರುಗಳಾದ ಸಿ.ಎಸ್.ಜಗದೀಶಬಾಬು, ಕೆ.ಎಂ.ಕೃಷ್ಣಮೂರ್ತಿ, ಜೆ.ಲಲಿತಮ್ಮ. ಕೆ.ಸುನಂದಮ್ಮ, ಎಸ್.ರಾಜಲಕ್ಷ್ಮಿ,  ಜೆ.ಬಿ.ಮಹೇಶ್, ಎಸ್.ಪ್ರಕಾಶ್,  ರುಕ್ಮಿಣಿ, ಕೊಂಗಾಡಿಯಪ್ಪ ಪ್ರೌಢಶಾಲೆಯ ಮುಖ್ಯಶಿಕ್ಷಕ ಎ.ಜಯರಾಮ್. ಸಹ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಪ್ರತಿಭಾವಂತರಿಗೆ ಅಭಿನಂದನೆ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲಾಮಟ್ಟದಲ್ಲಿ ಉತ್ತಮ ಅಂಕಗಳನ್ನು ಪಡೆದ ಸಿ.ನರೇಂದ್ರಬಾಬು, ಪಿ.ಹರ್ಷವರ್ಧನ್,  ವರಪ್ರಸಾದ್, ಎಂ.ನಂದಿನಿ ಮತ್ತು  ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ ಕೆ.ಚಂದನಾ, ಕೆ.ನವ್ಯ, ವಿ.ಮೇಘನಾ, ಡಿ.ಎಸ್.ನಂದಿನಿ, ಸಂಸ್ಕೃತ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ  ಕೆ.ಧನ್ಯ, ಹಿಂದಿ ಭಾಷೆಯಲ್ಲಿ 100 ಅಂಕಗಳಿಗೆ 100 ಅಂಕಗಳನ್ನು ಪಡೆದ ತ್ರಿವೇಣಿ, ತನಿಷ್ಕ, ಯು.ಪ್ರಿಯದರ್ಶಿನಿ, ಸುಭಾಷ್, ಕೀರ್ತನಾ, ವಿಜಯಕುಮಾರ್ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಶಾಲಾ ಹಂತದಲ್ಲಿ  ಅಗ್ರಶ್ರೇಣಿಯಲ್ಲಿ ತೇರ್ಗಡೆಯಾದ 22 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!