ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಬುಧವಾರ 15 ಮಂದಿ ಕರೊನಾ ಸೋಂಕು ದೃಢಪಟ್ಟಿದೆ.
ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಬುಧವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 6 ಪುರುಷರು ಹಾಗೂ 9 ಮಂದಿ ಮಹಿಳೆಯರು ಸೇರಿ ಹದಿನೈದು ಜನರಿಗೆ ಸೋಂಕು ದೃಡಪಟ್ಟಿದೆ.
ಹರಿತಲೇಖನಿಗೆ ದೊರಕಿರುವ ವರದಿಯಂತೆ. ಮಜರಾಹೊಸಹಳ್ಳಿ, ಮಾರಸಂದ್ರದಲ್ಲಿ 2, ಮೆಳೇಕೋಟೆ, ರೋಜಿಪುರ, ಗಂಗಾಧರಪುರ, ಕೊಂಗಾಡಿಯಪ್ಪ ಕಾಲೇಜು ಮುಖ್ಯ ರಸ್ತೆ, ತಿಪ್ಪಾಪುರ, ನಗರ್ತರಪೇಟೆ, ವಿನಾಯಕನಗರ, ಬ್ಯಾಂಕ್ ಸರ್ಕಲ್, ವರದನಹಳ್ಳಿ ಹಾಗೂ ಸಹಜಾನಂದ ನಗರದ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 848 ಮಂದಿಗೆ ಸೋಂಕು ತಗುಲಿದ್ದು, 517 ಮಂದಿ ಗುಣಮುಖರಾಗಿದ್ದರೆ 20 ಮಂದಿ ಸಾವನಪ್ಪಿದ್ದಾರೆ.
ಸೋಂಕಿಗೆ ಒಳಗಾದ 30ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 281 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.