ದೊಡ್ಡಬಳ್ಳಾಪುರ: ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐ.ಟಿ.ಐ.)ಯಲ್ಲಿ ವಿವಿಧ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಇಲಾಖೆ ವೈಬ್‍ಸೈಟ್ www.emptrg.kar.nic.in ನಲ್ಲಿ ಆನ್‍ಲೈನ್(ON-LINE) ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು 2020ರ ಆಗಸ್ಟ್ 31 ಕೊನೆಯ ದಿನವಾಗಿದೆ
ಹೆಚ್ಚಿನ ಮಾಹಿತಿಗಾಗಿ, ದೇವನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಾಚಾರ್ಯರಾದ ಲಕ್ಷ್ಮಿನಾರಾಯಣ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.