ಬೆಂ.ಗ್ರಾ.ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಕರ್ತವ್ಯ ನಿಷ್ಠೆ / ಸರಿ ದಾರಿಗೆ ಬರುತ್ತಿರುವ ಜಿಲ್ಲಾ ಕರೊನಾ ಬುಲೆಟಿನ್

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ತೀವ್ರ ಗೊಂದಲಕ್ಕೆ ಕಾರಣವಾದ ಕರೊನಾ ಸೋಂಕಿನ ಕುರಿತಾದ ಬುಲೆಟಿನ್ ವರದಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಕಾಳಜಿಯಿಂದ ಸರಿ ದಾರಿಗೆ ಮರಳುವ ಲಕ್ಷಣಗಳು ಕಂಡುಬಂದಿದೆ.

ಜಿಲ್ಲಾಧಿಕಾರಿ ರವೀಂದ್ರ ಅವರ ಅನಾರೋಗ್ಯದ ಕಾರಣ ಚಿಕಿತ್ಸೆಗೆ ತೆರಳಿದ ನಂತರ. ಕರೊನಾ ಸೋಂಕಿನ ಕುರಿತಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವರದಿಯಲ್ಲಿ ತೀವ್ರ ಗೊಂದಲ ಆರಂಭವಾಗಿತ್ತು.

ವರದಿ ಗೊಂದಲದ ಕಾರಣ ದೊಡ್ಡಬಳ್ಳಾಪುರದಲ್ಲಿ ಉಂಟಾದ ಆಕ್ರೋಶದ ಹಿನ್ನೆಲೆ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾಡಳಿತದ ವರದಿಗೆ ಪರ್ಯಾಯವಾಗಿ ದೊಡ್ಡಬಳ್ಳಾಪುರ ತಾಲೂಕು ವರದಿ ನೀಡುವಂತೆ ತಾಲೂಕು ಆಡಳಿತದ ಅಧಿಕಾರಿಗಳಿಗೆ ಸೂಚಿಸಿದರು.ಇದೇ ಹಾದಿ ತುಳಿದ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ ಹಾಗೂ ನೆಲಮಂಗಲ ತಾಲೂಕು ಆಡಳಿತ ಪ್ರತ್ಯೇಕ ಕೋವಿಡ್-19 ಬುಲೆಟಿನ್ ಕುರಿತು ವರದಿ ನೀಡಲು ಆರಂಭಿಸಿದವು.ಆದಾಗ್ಯೂ ಜಿಲ್ಲಾಡಳಿತದ ಬುಲೆಟಿನ್ ವರದಿ ಗೊಂದಲ ಮುಂದುವರೆಯಿತೆ ಹೊರತು ಅಂತ್ಯ ಕಾಣಲಿಲ್ಲ‌.

ಇದೇ ಬುಲೆಟಿನ್ ಗೊಂದಲ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಸಮ್ಮುಖದಲ್ಲಿ ಚರ್ಚೆಗೀಡಾಗಿ ಶಾಸಕರುಗಳು ತಾಲೂಕು ಬುಲೆಟಿನ್ ಅನಿರ್ವಾರ್ಯತೆ ಇದೆ ಎಂದು ಸ್ಪಷ್ಟಪಡಿಸಿದ್ದರು.

ಚಿಕಿತ್ಸೆ ನಂತರ ಕರ್ತವ್ಯಕ್ಕೆ ಮರಳಿದ್ದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರಿಗೆ ಕಳೆದ ಕೆಲ ದಿನಗಳ ಹಿಂದೆಷ್ಟೆ ಹರಿತಲೇಖನಿ ಜಿಲ್ಲಾ ಬುಲೆಟಿನ್ ಹಾಗೂ ವಾಸ್ತವ ವರದಿ ಗೊಂದಲದ ಕುರಿತು ಗಮನಕ್ಕೆ ತಂದಿತ್ತು.ಆ ವೇಳೆ ಬುಲೆಟಿನ್ ಗೊಂದಲ ನಿವಾರಿಸುವ ಭರವಸೆ ನೀಡಿದ್ದ ಜಿಲ್ಲಾಧಿಕಾರಿಗಳು ಹಂತ ಹಂತವಾಗಿ ಗೊಂದಲ ನಿವಾರಣೆಗೆ ಶ್ರಮಿಸಿದ್ದು,ಬಹಳ ದಿನಗಳ ನಂತರ ಜಿಲ್ಲಾಡಳಿತದ ಬುಲೆಟಿನ್ ವರದಿ ಹಾಗೂ ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿ ಸ್ವಲ್ಪ ಗೊಂದಲದ ನಡುವೆಯೂ ಒಂದೇ ರೀತಿಯಲ್ಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರೊನಾ ಬುಲೆಟಿನ್ ವರದಿಯಲ್ಲಿ (ಆಗಸ್ಟ್ 20 ರಂದು) 53 ಪುರುಷರು ಹಾಗೂ 24 ಮಹಿಳೆಯರು ಸೇರಿದಂತೆ 77 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.

ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 17 ಪುರುಷರು ಮತ್ತು 11 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 17 ಪುರುಷರು ಮತ್ತು 5 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 8 ಪುರುಷರು ಮತ್ತು 1 ಮಹಿಳೆಯರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 10 ಪುರುಷರು ಮತ್ತು 6 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 1 ಪುರುಷ ಮತ್ತು 1 ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]