ದೊಡ್ಡಬಳ್ಳಾಪುರ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವುಗಳ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 30 ದಿನಗಳ ಬ್ಯೂಟೀಷಿಯನ್ ಮತ್ತು ಹೈಜೀನ್ ಕುರಿತು ಕೌಶಲ್ಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಸೆಪ್ಟೆಂಬರ್-2020ರ ತಿಂಗಳ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯ ತರಬೇತಿ ಹಾಗೂ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ, ಯೋಜನಾ ವರದಿ ಹಾಗೂ ಉದ್ಯಮ ನಿರ್ವಹಣೆ ಕುರಿತು ತರಬೇತಿಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು 2020ರ ಆಗಸ್ಟ್ 29 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು 18 ವರ್ಷದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿಯನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿದೇರ್ಶಕರ ಕಚೇರಿ, ‘ಸಿಡಾಕ್’, ಕೆಜಿಐಟಿಐ ಕಟ್ಟಡ, ಕೌಶಲ್ಯ ಭವನ ಆವರಣ, ಡೈರಿ ವೃತ್ತ, ಬನ್ನೇರ್ ಘಟ್ಟ ರಸ್ತೆ, ಬೆಂಗಳೂರು. ಹಾಗೂ ದೂ.ಸಂ.: 080-29568484 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.