ದೊಡ್ಡಬಳ್ಳಾಪುರ: ಶಾಲೆ ,ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛ ತೆಗೆ ಹೆಚ್ಚು ಒತ್ತು ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದ ಮುಂಭಾಗದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವತಿಯಿಂದ “ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ)” ಮತ್ತು “ಜಲಜೀವನ್ ಮಿಷನ್” ಅಡಿಯಲ್ಲಿ ಜಿಲ್ಲಾದ್ಯಂತ “ಗಂದಗಿ ಮುಕ್ತ ಭಾರತ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶವು ಕೊಳಕು(ಗಂದಗಿ) ಮುಕ್ತವಾಗಲು ನಾವೆಲ್ಲರೂ ಸಂಕಲ್ಪ ತೊಡಬೇಕಿದೆ.ದಿನ ನಿತ್ಯದ ಜೀವನದಲ್ಲಿ ಸ್ವಚ್ಚತೆ ಹೆಚ್ಚು ಒತ್ತು ನೀಡುವುದು. ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮನಸ್ಥಿತಿ ಬೆಳಸಿಕೊಳ್ಳಬೇಕಿದೆ ಎಂದರು.
ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ ಅವರು ಗಿಡ ನೆಡುವ ಮೂಲಕ ಚಾಲನೆನೀಡಿದರು.
ಈ ವೇಳೆ ಉಪ ಕಾರ್ಯದರ್ಶಿ ಕೆ.ಕರಿಯಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಕಚೇರಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು