ಸಾರ್ವಜನಿಕ ಗಣೇಶೋತ್ಸವ ಹೊಸ ಆದೇಶ : ನೆಮ್ಮದಿ ಪಟ್ಟ ಮಾರಾಟಗಾರರು

ದೊಡ್ಡಬಳ್ಳಾಪುರ: ಸಾರ್ವಜನಿಕ ಗಣೇಶೋತ್ಸವ ನಿಷೇಧದ ಬಗ್ಗೆ ಈ ಹಿಂದೆ ಸರ್ಕಾರ ಹೊರಡಿಸಿದ್ದ ಆದೇಶದಲ್ಲಿ ಮಾರ್ಪಾಟು ಮಾಡಿ, ಪರಿಷ್ಕೃತ ಮಾರ್ಗಸೂಚಿ ಹೊರಡಿಸಿರುವುದು ಗಣೇಶ ಮಾರಾಟಗಾರರಲ್ಲಿ ಕೊಂಚ ಸಮಾಧಾನ ತಂದಿದೆ.

ಹಿಂದಿನ ಆದೇಶ :

ಈ ಬಾರಿ ಚೌತಿ ಹಬ್ಬವನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ದೇವಸ್ಥಾನಗಳ ಒಳಗೆ ಮತ್ತು ಮನೆಗಳಲ್ಲಿ ಮಾತ್ರವೇ ಆಚರಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವಂತಿಲ್ಲ. ದೇವಾಲಯಗಳಲ್ಲಿ ಆಚರಿಸಲು ಅನುಮತಿ ಇದ್ದು, ಪ್ರತಿ ನಿತ್ಯ ಸ್ಯಾನಿಟೈಸೇಷನ್ ಕಡ್ಡಾಯ ಹಾಗೂ ಕಡ್ಡಾಯವಾಗಿ ಕೊವಿಡ್-19 ಮಾರ್ಗಸೂಚಿ ಪಾಲಿಸಲು ಸೂಚನೆ. ಗಣಪತಿ ವಿಗ್ರಹವನ್ನು  ಮನೆಯಲ್ಲಿಯೇ ವಿಸರ್ಜಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೊಳ, ಕೆರೆ, ಬಾವಿ ಮತ್ತು ಕಲ್ಯಾಣಿಗಳಲ್ಲಿ ವಿಸರ್ಜಿಸುವಂತಿಲ್ಲ. ಮೆರವಣಿಗೆ ನಿರ್ಬಂಧ ಹಾಗೂ ಸ್ಥಳೀಯ ಸಂಸ್ಥೆ, ಪೊಲೀಸ್ ಇಲಾಖೆಗಳ ನಿರ್ದೇಶನವನ್ನು ಪಾಲಿಸಬೇಕು.

ಹೊಸ ಆದೇಶ:

ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಸಿದಂತೆ ಮಾತ್ರ ಮಾರ್ಗಸೂಚಿ ಬದಲಾಗಿದ್ದು, ಉಳಿದ ಎಲ್ಲಾ ನಿಯಮಗಳು ಅನ್ವಯಿಸುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಕಡ್ಡಾಯ. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದೇ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಮನವಿ ಮಾಡಲಾಗಿದೆ.

ಮಾರಾಟ ಹೇಗೆ? :

ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಪ್ರತಿವರ್ಷ ಗಣೇಶ ಮೂರ್ತಿಗಳ ಮಾರಾಟ ಮಾಡಲು ಮೂರ್ತಿ ತಯಾರಕರು ಸಿದ್ದರಾಗುತ್ತಿದ್ದರು. ಆದರೆ ಈ ಬಾರಿ ಕೋವಿಡ್-19 ಸೋಂಕು ಹರಡುವಿಕೆ ಹಿನ್ನಲೆಯಲ್ಲಿ ಸರ್ಕಾರದ ಗಣೇಶೋತ್ಸವದ ಮಾರ್ಗಸೂಚಿಗಳು  ಹಾಗೂ ನಗರಸಭೆಯ ಬ್ಯಾನರ್ ಪ್ರಕಟಣೆಗಳು ವ್ಯಾಪಾರಸ್ಥರಿಗೆ ಗೊಂದಲ ಮೂಡಿಸಿತ್ತು. ಮನೆಗಳಲ್ಲಿ ಸಣ್ಣ ಗಣಪನ ಮೂರ್ತಿಗಳನ್ನು ಪ್ರತಿಷ್ಟಾಪಿಸುವುದೇನೋ ಸರಿ. ಆದರೆ ಸಾರ್ವಜನಿಕವಾಗಿ ಮಾರಾಟ ಮಾಡುವುದನ್ನು ನಿಷೇಸಿದರೆ ಜನರು ಮೂರ್ತಿಗಳನ್ನು ಖರೀದಿಸುವುದು ಹೇಗೆ ಎನ್ನುವ ಪ್ರಶ್ನೆ ಎದುರಾಗಿತ್ತು.

ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡಿ

ಈ ಬಾರಿ ಸಾರ್ವಜನಿಕ ಗಣೇಶೋತ್ಸವ ನಿಷೇಧ ಮಾಡಲಾಗುವುದು ಎನ್ನುವ ಕಾರಣದಿಂದ ಮನೆಗಳಲ್ಲಿ ಪ್ರತಿಷ್ಟಾಪಿಸುವ 2 ಅಡಿಗೂ ಸಣ್ಣ ಮೂರ್ತಿಗಳನ್ನು ತಯಾರು ಮಾಡಿದ್ದೇವೆ. ಸರ್ಕಾರದ ಆದೇಶದಂತೆ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲು ಸಿದ್ದರಿದ್ದು, ನಮಗೆ ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡಬೇಕು-ಶಿವಾನಂದ್,ಗಣಪತಿ ಮೂರ್ತಿ ತಯಾರಕರು

ನಗರಸಭೆ ಹಾಗೂ ಸಂಬಂದಿಸಿದ  ಇಲಾಖೆಗಳ ಅನುಮತಿ  ಕಡ್ಡಾಯ

ಸರ್ಕಾರದ ಮಾರ್ಗಸೂಚಿಯಿಂತೆ ನಗರಸಭೆ ಹಾಗೂ ಸಂಬಂದಿಸಿದ  ಇಲಾಖೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸಿ, ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಟಾಪಿಸಬೇಕು.ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವ ಕುರಿತು, ಸರ್ಕಾರದ ಆದೇಶ ಉಲ್ಲಂಘನೆಯಾಗದಂತೆ  ಷರತ್ತುಬದ್ಧ ಅನುಮತಿ ನೀಡಲಾಗಿದೆ –ರಮೇಶ್.ಎಸ್.ಸುಣಗಾರ್,ಪೌರಾಯುಕ್ತರು, ನಗರಸಭೆ

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!