ಆಧುನಿಕ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳಿಗೆ ಪರಿಹಾರವಾಗಬಲ್ಲದು: ಬಿ.ಸಿ.ಪಾಟೀಲ್

ಬೆಂಗಳೂರು: ಆಧುನಿಕ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳನ್ನು ಪರಿಹರಿಸಬಲ್ಲದು  ಹಾಗೂ ತಂತ್ರಜ್ಞಾನ ಕೃಷಿ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಅವಕಾಶವನ್ನು ಸೃಷ್ಟಿಸಬಲ್ಲದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ವಿಕಾಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ “ಕೃಷಿ ನವೋದ್ಯಮ” (ಅಗ್ರಿ ಸ್ಟಾರ್ಟಪ್) ಸಮ್ಮೇಳನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2014 ರಿಂದ ಕೇಂದ್ರ ಸರ್ಕಾರವನ್ನು ಮುನ್ನಡೆಸುತ್ತಿದ್ದು, ಮೋದಿಯವರಿಂದಾಗಿ ದೇಶದಲ್ಲಿ ಸ್ಟಾರ್ಟಪ್ ಗಳ ಯುಗ ಆರಂಭವಾಯಿತು. 2018 ರ ಹೊತ್ತಿಗೆ ದೇಶದಲ್ಲಿ 50 ಸಾವಿರ ನವೋದ್ಯಮಗಳು, ಹಾಗೂ ಬಳಿಕ 9,300 ಸ್ಟಾರ್ಟಪ್ ಗಳು ಪ್ರಾರಂಭವಾದವು. ಇವುಗಳ ಪೈಕಿ 474 ಕೃಷಿ ಉದ್ಯಮಗಳು ಆರಂಭವಾಗಿವೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕ್ಷೇತ್ರಕ್ಕೆ ನವಚೈತನ್ಯವನ್ನು ಒದಗಿಸಲು ಕೃಷಿ ಸ್ಟಾರ್ಟಪ್ ಗಳನ್ನು ಆರಂಭಿಸಿ ರೈತರು ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವೇದಿಕೆ ಸೃಷ್ಟಿಸಲಾಗಿದೆ ಎಂದರು.

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ 4 ಸಾವಿರ ಸ್ಟಾರ್ಟಪ್ ಗಳನ್ನು ಆರಂಭಿಸಲಾಗುತ್ತಿದೆ. ದೇಶದ ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಆರಂಭಿಕ ನೀತಿಗಳನ್ನು ಹೊರತಂದಿದೆ. ಇದರಿಂದಾಗಿ ವಾರ್ಷಿಕವಾಗಿ 4,000 ನವೋದ್ಯಮ ಸೃಷ್ಟಿಸಲು ಅನುಕೂಲವಾಗಿದೆ.  ಸ್ಟಾರ್ಟಪ್ ಗಳು  ಯುವಕರಿಗೆ 1.7 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ. ಭಾರತದಲ್ಲಿ ಕೃಷಿ ನವೋದ್ಯಮ ಪ್ರಾರಂಭದ ಹಂತದಲ್ಲಿಯೇ  ಆಕರ್ಷಿತವಾಗಿರುವುದು ಹೆಮ್ಮೆಯ ವಿಚಾರ. ಅಂಕಿಅಂಶಗಳ ಪ್ರಕಾರ ಪ್ರತಿದಿನ 2 ರಿಂದ 3 ಸ್ಟಾರ್ಟ್ಅಪ್ಗಳು ಭಾರತದಲ್ಲಿ ಸ್ಥಾಪನೆಯಾಗುತ್ತಿವೆ.ಅಕ್ಸೆಂಚರ್ ಕಂಪನಿಯು ಮಾಡಿದ ಸಮೀಕ್ಷೆಯ ಅಂದಾಜಿನ ಪ್ರಕಾರ, ನಮ್ಮ ದೇಶದಲ್ಲಿ ಅಗ್ರಿ ಸ್ಟಾರ್ಟ್ಅಪ್‌ಗಳಿಂದ 4.5 ಬಿಲಿಯನ್ ಡಾಲರ್ ಮಾರುಕಟ್ಟೆಯ ಸೃಷ್ಟಿ ಆಗಲಿದೆ ಎಂದು ಅಂದಾಜಿಸಲಾಗಿದೆ ಎಂದರು.

ಸ್ಟಾರ್ಟಪ್  ವ್ಯವಸ್ಥೆಗಳನ್ನು ಹೊಂದಿರುವ ವಿಶ್ವದ 20 ಅಗ್ರ ದೇಶಗಳಲ್ಲಿ ಬೆಂಗಳೂರು 15 ನೇ ಸ್ಥಾನವನ್ನು ಪಡೆದುಕೊಂಡಿದೆ. ಅಲ್ಲದೇ ಏಷ್ಯಾ ಖಂಡದಲ್ಲಿ ಸಿಂಗಾಪೂರ್ ಬಳಿಕ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಸಹ  ಬೆಂಗಳೂರು ಗುರುತಿಸಲ್ಪಟ್ಟಿದೆ. ಕರ್ನಾಟಕ ರಾಜ್ಯ ಜೈವಿಕ ಹಾಗೂ ಸಿರಿಧಾನ್ಯಗಳ ಹಬ್ ಎಂದು ಕರೆಯಲ್ಪಟ್ಟಿದೆ.  ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯವನ್ನು ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದಾಗಿ ಕೃಷಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ. ರಾಜ್ಯದಲ್ಲಿ ಜೀವರ್ಗಿ, ಹಿರಿಯೂರು, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಈಗಾಗಲೇ ಮೆಗಾಫುಡ್ ಪಾರ್ಕ್ ಗಳಿದ್ದು, ಕೇಂದ್ರ ಸರ್ಕಾರದಡಿ ಕೆ.ಆರ್.ಪೇಟೆ ಹಾಗೂ ತುಮಕೂರಿನಲ್ಲಿಯೂ ಮೆಗಾಫುಡ್ ಪಾರ್ಕ್ ಆರಂಭಿಸಲಾಗಿದೆ. ಆ ಮೂಲಕ ಕೃಷಿ ಉತ್ಪಾದನಾ, ಆಹಾರ ಉತ್ಪಾದನಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಆದ್ಯತೆ ಕಲ್ಪಿಸಲಾಗಿದೆ. ಆತ್ಮ ನಿರ್ಭರ್ ಯೋಜನೆಯಡಿ ಆಹಾರ ಉತ್ಪಾದನಾ ಕೈಗಾರಿಕೆಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ವೆಬಿನಾರ್ ನಲ್ಲಿ ಸಚಿವರು ಮಾಹಿತಿ ಹಂಚಿಕೊಂಡರು.

ಕೃಷಿ ನವೋದ್ಯಮದಲ್ಲಿ ಕೃಷಿ ಉತ್ಪಾದನ ಉದ್ಯಮಿಗಳು  ದೇಶಾದ್ಯಂತ ಸಕ್ರಿಯವಾಗಿ ಭಾಗವಹಿಸಿರುವುದು ಖುಷಿ ತಂದಿದೆ. ಕೊರೊನಾ  ವೈರಸ್‌ನಿಂದಾಗಿ ಬಿಕ್ಕಟ್ಟಿನ ಅವಧಿಯಲ್ಲಿ ರೈತರು ಬೆಳೆದ  ತರಕಾರಿ ಹಣ್ಣು ಸೇರಿದಂತೆ ಕೃಷಿ ಫಸಲುಗಳು ನಾಶವಾಗದಂತೆ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ  ಕೋಲ್ಡ್ ಸ್ಟೋರೇಜ್ ಗಳನ್ನು ಆರಂಭಿಸಲಾಯಿತು.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲ ಸಹಕಾರ ಸೂಚನೆಯಡಿ ಕೃಷಿಕ್ಷೇತ್ರದಲ್ಲಿ ರೈತರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು.ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್ ಕತ್ರಿ ಅವರ ಮೇಲ್ವಿಚಾರಣೆಯಲ್ಲಿ  ಕೃಷಿ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗಗಳು ಉದ್ಯಮಿಗಳಿಗಾಗಿ ಕೃಷಿ ನವೋದ್ಯಮ ವೇದಿಕೆ ಆಯೋಜಿಸಿರುವುದು ಸಂತಸ ಹಾಗೂ ಹೆಮ್ಮೆಯ ವಿಚಾರ ಎಂದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕತ್ರಿ ಸ್ವಾಗತಿಸಿ, ಕೃಷಿ ಇಲಾಖೆ ಆಯುಕ್ತ ಬ್ರಿಜೆಷ್ ಕುಮಾರ್ ದೀಕ್ಷಿತ್ ವಂದಿಸಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!