ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಬಾಗಿನ ಅರ್ಪಿಸಿದರು.

ಕಪಿಲಾ ನದಿಯು ಮೈದುಂಬಿ ಹರಿಯುತ್ತಿರುವ ಕಬಿನಿ ಜಲಾಶಯಕ್ಕೆ ಸಂಪ್ರದಾಯದಂತೆ ಬಾಗಿನ ಸಮರ್ಪಿಸಿ ಮಾತನಾಡಿದ ಅವರು, ಕಬಿನಿ ಜಲಾಶಯವು ನಿರ್ಮಾಣವಾದಾಗಿನಿಂದ 29 ಬಾರಿ ತುಂಬಿದ್ದು, ಕಳೆದ 3 ವರ್ಷಗಳಿಂದ ಸತತವಾಗಿ ಜಲಾಶಯವು ಪೂರ್ಣಮಟ್ಟಕ್ಕೆ ತುಂಬುತ್ತಿರುವುದು ಸಂತೋಷದ ವಿಚಾರ ಎಂದು ಹೇಳಿದರು.

ಈ ಬಾರಿ ವರುಣನ ಕೃಪೆಯಿಂದಾಗಿ ರೈತರು ಸಂಭ್ರಮದಿಂದ ಬೇಸಾಯದಲ್ಲಿ ಪಾಲ್ಗೊಂಡಿದ್ದಾರೆ. ಪ್ರಕೃತಿ ಮಾತೆ ಕನ್ನಡ ನಾಡನ್ನು ಸಂಪದ್ಭರಿತವಾಗಿಸಿದ್ದು, ಅದರ ಸದ್ಬಳಕೆ ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೂ ಅವರು ಶಂಕುಸ್ಥಾಪನೆ ನೆರವೇರಿಸಿದರು.  

ತಾಲ್ಲೂಕಿನ ಚೀಚನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಕೆಲವು ಗ್ರಾಮಗಳ ರಸ್ತೆಗಳು ಸಂಪರ್ಕ ಕಳೆದುಕೊಂಡು, ಜನರು ತೊಂದರೆಗಿಡಾಗಿದ್ದರಿಂದ ಈ ಸೇತುವೆ ನಿರ್ಮಾಣ ಬಹದಿನಗಳ ಬೇಡಿಕೆಯಾಗಿತ್ತು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗಮನಹರಿಸಿ ಈ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಕೊಡಿಸಿದ್ದರಿಂದ ಶುಕ್ರವಾರ ಕಾಮಗಾರಿಗೆ ಚಾಲನೆ ನೀಡಲಾಯಿತು.

ಕಬಿನಿ ಅಣೆಕಟ್ಟೆಯ ಕೆಳಭಾಗದಲ್ಲಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮತ್ತು ಮಾನಂದವಾಡಿ ಮುಖ್ಯರಸ್ತೆಯಿಂದ ಕಬಿನಿ ಜಲಾಶಯಕ್ಕೆ ಸಂಪರ್ಕ ರಸ್ತೆಯ ಅಭಿವೃದ್ಧಿಗೆ 50.30 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ರಾಜ್ಯದ ನೀರಾವರಿ ಕ್ಷೇತ್ರದ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದ್ದು, ನೀರಾವರಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಇದರಂತೆ ಈವರೆಗೆ ನಮ್ಮ ಸರ್ಕಾರ ಸುಮಾರು 7,400 ಕೋಟಿ ರೂ.ಗಳ 28 ವಿವಿಧ ಯೋಜನೆಗಳಿಗೆ ಮಂಜೂರಾತಿಗೆ ಅನುಮೋದನೆ ನೀಡಿದ್ದು, ಕಾಮಗಾರಿಗಳು ವಿವಿಧ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ 52 ಗ್ರಾಮಗಳಿಗೆ 212 ಕೋಟಿ ರೂ.ಗಳ ವೆಚ್ಚದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು ಹಾಗೂ ಕಬಿನಿ ಬಲದಂಡೆ ನಾಲೆ ಆಧುನೀಕರಣಗೊಳಿಸಲಾಗಿದೆ. ಒಟ್ಟಾರೆಯಾಗಿ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ನಮ್ಮ ಸರ್ಕಾರವು ನೀರು ವ್ಯರ್ಥವಾಗದಂತೆ ತಡೆಯಲು ಜಲಾಶಯಗಳ ಕಾಲುವೆಗಳ ಆಧುನೀಕರಣ  ಸೇರಿದಂತೆ, ಏತ ನೀರಾವರಿ ಹಾಗೂ ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಕೈಗೊಂಡಿದೆ. ಈಗಿನ ಆರ್ಥಿಕ ಇತಿಮಿತಿಯಲ್ಲಿಯೂ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಲ.ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, ಅನಿಲ್ ಚಿಕ್ಕಮಾದು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಂ, ಉಪಾಧ್ಯಕ್ಷರಾದ ಗೌರಮ್ಮ ಸೋಮಶೇಖರ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಮುಖ್ಯ ಇಂಜಿನಿಯರ್ ಶಂಕರೇಗೌಡ ಇತರರು ಹಾಜರಿದ್ದರು.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]