ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 22 ರಂದು) 43 ಪುರುಷರು ಹಾಗೂ 23 ಮಹಿಳೆಯರು ಸೇರಿದಂತೆ 66 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ಬುಲೆಟಿನ್ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 11 ಪುರುಷರು ಮತ್ತು 4 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 6 ಪುರುಷರು ಮತ್ತು 4 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 16 ಪುರುಷರು ಮತ್ತು 9 ಮಹಿಳೆಯರು,ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 1 ಪುರುಷ ಮತ್ತು 1 ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ಕಳೆದೆರಡು ದಿನಗಳಿಂದ ಸರಿ ದಾರಿಯಲ್ಲಿದ್ದ ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಕಿಅಂಶಗಳ ವರದಿ,ಇಂದು ವೆತ್ಯಾಸವಿರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.