ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನವೂ ತಾಲೂಕಿಗೆ ಕರೊನಾ ಸೊಂಕು ಬಿಡುವು ನೀಡಿಲ್ಲ.ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ 5 ಜನರಿಗೆ ಸೋಂಕು ದೃಢಪಟ್ಟಿದೆ.
ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ, ಶನಿವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 3 ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿ ಐದು ಜನರಿಗೆ ಸೋಂಕು ದೃಡಪಟ್ಟಿದೆ.
ಹರಿತಲೇಖನಿಗೆ ದೊರಕಿರುವ ವರದಿಯಂತೆ.ದೇವರಾಜನಗರ, ಕುಚ್ಚಪ್ಪನಪೇಟೆ, ಬಾಶೆಟ್ಟಿಹಳ್ಳಿ, ಕರೇನಹಳ್ಳಿ ಹಾಗೂ ಚಿಕ್ಕಪೇಟೆಯ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 885 ಮಂದಿಗೆ ಸೋಂಕು ತಗುಲಿದ್ದು, 581 ಮಂದಿ ಗುಣಮುಖರಾಗಿದ್ದರೆ 20 ಮಂದಿ ಸಾವನಪ್ಪಿದ್ದಾರೆ.
ಸೋಂಕಿಗೆ ಒಳಗಾದ 36 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 248 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.