ಬೆಂಗಳೂರು: ಕರ್ನಾಟಕದ ಸಂಫೂರ್ಣ ಕಾಂಗ್ರೆಸ್ ಸೋನಿಯಾ ಗಾಂಧಿ ಮತ್ತು ಗಾಂಧಿ ಕುಟುಂಬದ ನಾಯಕತ್ವದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಷ್ಟ್ರೀಯ ಮಾಧ್ಯಮಗಳಿಗೆ ಅಭಿಪ್ರಾಯ ನೀಡಿದ್ದಾರೆ.
ಪಕ್ಷದ ಬಿಕ್ಕಟ್ಟಿನ ಸಮಯದಲ್ಲಿ ಅವರು ಕಾಂಗ್ರೆಸ್ ಅನ್ನು ಮುನ್ನಡೆಸಿದ್ದಾರೆ ಮತ್ತು ನಮ್ಮ ಪಕ್ಷವನ್ನು ಉಳಿಸಿದ್ದಾರೆ.ಚರ್ಚಿಸಬೇಕಾದ ಯಾವುದನ್ನಾದರೂ ಪಕ್ಷದ ವೇದಿಕೆಯಲ್ಲಿ ಮಾಡಬೇಕು ಮತ್ತು ಮಾಧ್ಯಮಗಳಲ್ಲಿ ಅಲ್ಲ ಎಂದಿದ್ದಾರೆ.
ಇವರ ಬೆನ್ನಲ್ಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು ನಾವೆಲ್ಲರೂ ಪ್ರಯತ್ನಿಸಬೇಕು, ದುರ್ಬಲಗೊಳಿಸುವುದಲ್ಲ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪದವಿ ಕುರಿತು ಚರ್ಚೆ ತೀವ್ರಗೊಂಡಿದ್ದು, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ನೀಡಿದ್ದಾರೆ ಎಂಬ ವರದಿಗಳು ಸುಳ್ಳು ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದಾರೆ.
ಇದಕ್ಕು ಮುನ್ನ ಸೋನಿಯಾ ಗಾಂಧಿ ರಾಜೀನಾಮೆ ನೀಡಿದ್ದಾರೆಂಬ ವರದಿಗಳನ್ನು ಕೆಲ ಮಾಧ್ಯಮಗಳು ಬಿತ್ತರಿಸಿದ್ದವು.
ಇದರ ಬೆನ್ನಲ್ಲೆ ಪಕ್ಷದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಮಾತನಾಡಿ, ಅಧ್ಯಕ್ಷರಾಗಿ ಮರಳಿ ಬರಲು ಯಾರಾದರೂ (ರಾಹುಲ್ ಗಾಂಧಿ) ಅವರನ್ನು ಕೇಳುತ್ತಿದ್ದರೆ, ಅದು ಅವರೇ ನಿರ್ಧರಿಸಬೇಕು.ಅವರು ಪಕ್ಷದ ಅಧ್ಯಕ್ಷರಾಗಬೇಕೆಂದು ಯಾರು ಬಯಸುತ್ತಾರೋ,ನಾನು ನನ್ನ ಧ್ವನಿಗೆ ಸೇರುತ್ತೇನೆ. ಅವರು ಮತ್ತೆ ಪಕ್ಷದ ಅಧ್ಯಕ್ಷರಾಗುತ್ತಾರೆ ಎಂದು ಅವರು ನಿರ್ಧರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
ಉಳಿದಂತೆ ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.